ಭಾರತ
ಭಾರತ

10 ವರ್ಷಗಳ ಬಳಿಕ ಭಾರತಕ್ಕೆ ಏಷ್ಯಾ ಹಾಕಿ ಚಾಂಪಿಯನ್ ಪಟ್ಟ!

ಏಷ್ಯಾ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ 10 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದೆ...
Published on
ಢಾಕಾ: ಏಷ್ಯಾ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ 10 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದೆ. 
ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಮಲೇಷ್ಯಾ ತಂಡವನ್ನು 2-1 ಗೋಲುಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ 3ನೇ ಬಾರಿ ಏಷ್ಯಾ ಕಪ್ ಜಯಿಸಿದ ಸಾಧನೆ ಮಾಡಿದೆ. 
ಭಾರತದ ಪರ ರಮಣದೀಪ್ ಸಿಂಗ್ ಹಾಗೂ ಲಲಿತ್ ಉಪಾಧ್ಯಾಯ್ ತಲಾ 1 ಗೋಲು ಬಾರಿಸಿದರು. 
1982ರಲ್ಲಿ ಪ್ರಾರಂಭಗೊಂಡ ಏಷ್ಯಾಕಪ್ ಟೂರ್ನಿ ಇಲ್ಲಿಯವರೆಗೆ 10 ಬಾರಿ ನಡೆದಿದೆ. ಭಾರತ ತಂಡ 2003 ಮತ್ತು 2007ರಲ್ಲಿ ಪ್ರಶಸ್ತಿ ಜಯಿಸಿತ್ತು. ಅದಾದ ಬಳಿಕ ಮೊದಲ ಬಾರಿ ಚಾಂಪಿಯನ್ ಆಗಿದೆ. ಇದು ಬಿಟ್ಟರೆ 5 ಬಾರಿ ರನ್ನರ್ ಅಪ್ ಆಗಿದೆ. ಮಲೇಷ್ಯಾ ತಂಡ ಏಷ್ಯಾ ಕಪ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಫೈನಲ್ ತಲುಪಿ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com