ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ಪಂದ್ಯದಲ್ಲಿ ಕಿಡಂಬಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜಪಾನ್ ಆಟಗಾರ ಕೆಂಟಾ ನಿಶಿಮೊಟೊ ವಿರುದ್ಧ 21-14, 21-13 ನೇರ ಸೆಟ್ ಗಳಿಂದ ಜಯ ಗಳಿಸುವ ಮೂಲಕ ಮೊದಲ ಫ್ರೆಂಚ್ ಓಪನ್ ಟೈಟಲ್ ಗೆ ಮುತ್ತಿಟ್ಟರು.
ಫ್ರೆಂಚ್ ಓಪನ್ ಸೂಪರ್ ಸಿರೀಸ್ ಗೆಲ್ಲುವ ಮೂಲಕ ಕಿಡಂಬಿ ಶ್ರೀಕಾಂತ್ ಇದೇ ವರ್ಷದಲ್ಲಿ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ಭಾರತದ ಆಟಗಾರ ಎಚ್ ಎಸ್ ಪ್ರನೋಯ್ ಅವರನ್ನು 14-21, 21-19, 21-18 ಸೆಟ್ ಗಳಿಂದ ಪರಾಭವಗೊಳಿಸಿ ಫೈನಲ್ ಗೆ ಪ್ರವೇಶಿಸಿದ್ದರು.