ಸಿಯೋಲ್: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕೊರಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಈ ಗೆಲುವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ.
ನಿನ್ನೆ ಪ್ರಧಾನಿ ಮೋದಿ ಅವರು 67ನೇ ವಸಂತಕ್ಕೆ ಕಾಲಿಟ್ಟಿದ್ದು ಈ ಸಂದರ್ಭದಲ್ಲಿ ನಾನು ಕೊರಿಯಾ ಸೂಪರ್ ಸಿರೀಸ್ ಗೆದ್ದಿರುವುದು ತುಂಬಾ ಖುಷಿಯಾಗಿದೆ. ನನಗೆ ಸಂದ ಜಯವನ್ನು ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ ಎಂದು ಪಿವಿ ಸಿಂಧು ಟ್ವೀಟ್ ಮಾಡಿದ್ದಾರೆ.
ಪಿವಿ ಸಿಂಧು ಟ್ವೀಟ್ ನಲ್ಲಿ ನನ್ನ ಈ ಗೆಲುವನ್ನು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ, ನನ್ನ ಅಚ್ಚುಮೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲು ಇಚ್ಛಿಸುತ್ತೇನೆ ಎಂದು ಬರೆದಿದ್ದಾರೆ.
I dedicate this Victory for our beloved Prime Minister Shri Modiji on his Birthday for his untiring and self less services to our Country. https://t.co/frsNmZvtkK