ಅಶ್ವಿನಿ ಪೊನ್ನಪ್ಪ
ಕ್ರೀಡೆ
ಕಾಮನ್ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ನಲ್ಲಿ ಅಶ್ವಿನಿ ಪೊನ್ನಪ್ಪ- ಎನ್.ಸಿಕ್ಕಿ ರೆಡ್ಡಿ ಜೋಡಿಗೆ ಕಂಚು
21ನೇ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಡಬಲ್ಸ್ ನಲ್ಲಿ ಕರ್ನಾಟಕದ...
ಗೋಲ್ಡ್ ಕೋಸ್ಟ್: 21ನೇ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಡಬಲ್ಸ್ ನಲ್ಲಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಮತ್ತು ಎನ್.ಸಿಕ್ಕಿ ರೆಡ್ಡಿ ಅವರು ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕ್ಯಾರರಾ ಕ್ರೀಡಾ ಸಂಕೀರ್ಣದಲ್ಲಿ ಇಂದು ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್ ಸಿಕ್ಕಿ ರೆಡ್ಡಿ ಅವರು ಆಸ್ಟ್ರೇಲಿಯಾದ ಸೆಟಯಾನಾ ಮಾಪಾಸಾ ಮತ್ತು ಗ್ರೊನಿಯಾ ಸೊಮೆರ್ವಿಲ್ಲೆ ಅವರ ವಿರುದ್ಧ 21-19, 21-19 ನೇರ ಸೆಟ್ ಗಳಿಂದ ಸೋಲಿಸುವ ಮೂಲಕ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟಿದ್ದಾರೆ.
ನಿನ್ನೆ ನಡೆದ ಮಹಿಳೆಯರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪೈಪೋಟಿಯಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ಎನ್.ಸಿಕ್ಕಿ ರೆಡ್ಡಿ 21–11, 21–13ರಿಂದ ಶ್ರೀಲಂಕಾದ ಹಸಿನಿ ಅಂಬಲಾಂಗೊಡಗೆ ಮತ್ತು ಮಧುಶಿಕಾ ದಿಲ್ರುಕ್ಷಿ ಅವರನ್ನು ಸೋಲಿಸಿದ್ದರು.
ಇನ್ನು ಪುರುಷರ ಡಬಲ್ಸ್ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಹರ್ಮೀತ್ ದೇಸಾಯಿ ಮತ್ತು ಸನಿಲ್ ಶಂಕರರ್ ಶೆಟ್ಟಿ ಅವರು ಸಹ ಕಂಚಿನ ಪದಕ ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ