ವುಹಾನ್: ಚೀನಾದ ವುಹಾನ್ ನಲ್ಲಿ ನಡೆಯುತ್ತಿರುವ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಮತ್ತು ಪಿ.ವಿ. ಸಿಂಧು ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದ ಸೈನಾ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲೂ ಗೆಲುವಿನ ಓಟ ಮುಂದುವರಿಸಿದ್ದು, ಇಂದು ಚೀನಾದ ಗೌವೊ ಫಾಂಗ್ ಜಿ ವಿರುದ್ಧ 21-18, 21-8 ಅಂತರದ ಗೆಲುವು ದಾಖಲಿಸುವ ಎಂಟರ ಘಟ್ಟ ಪ್ರವೇಶಿಸಿದ್ದಾರೆ.
ಕ್ವಾರ್ಟರ್ ಫೈನಲ್ ನಲ್ಲಿ ಸೈನಾ, ಕೊರಿಯಾದ ಲೀ ಜಾಂಗ್ ಮಿ ವಿರುದ್ಧ ಸೆಣಸಲಿದ್ದಾರೆ.
ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧು ಸಹ, ಚೀನಾದ ಚೆನ್ ಕ್ಸಿಯಾಕ್ಸಿನ್ ವಿರುದ್ಧ 21-12, 21-15 ಅಂತರದ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಇನ್ನು ಪುರುಷ ಸಿಂಗಲ್ಸ್ ವಿಭಾಗದಲ್ಲೂ ಅಗ್ರ ಶ್ರೇಯಾಂಕಿತ ಕಿಡಂಬಿ ಶ್ರೀಕಾಂತ್ ಮತ್ತು ಜಾಗತಿಕ ರ‍್ಯಾಂಕಿಂಗ್‌ನಲ್ಲಿ 10ನೇ ಸ್ಥಾನದಲ್ಲಿರುವ ಎಚ್.ಎಸ್. ಪ್ರಣೋಯ್ ಕೂಡ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ.