ಏಷ್ಯನ್ ಗೇಮ್ಸ್ ನಲ್ಲಿ ಭಾರತ ಧ್ವಜ ಹಿಡಿದು ಮುನ್ನಡೆಯಲಿರುವ ನೀರಜ್ ಚೋಪ್ರಾ

ಇಂಡೋನೇಷಿಯಾದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಭಾರತ ಧ್ವಜವನ್ನು ಹಿಡಿದು .....
ನೀರಜ್ ಚೋಪ್ರಾ
ನೀರಜ್ ಚೋಪ್ರಾ
ನವದೆಹಲಿ: ಇಂಡೋನೇಷಿಯಾದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಭಾರತ ಧ್ವಜವನ್ನು ಹಿಡಿದು ಭಾರತಿಯ ಕ್ರೀಡಾಪಟುಗಳನ್ನು ಮುನ್ನಡೆಸುವ ಗೌರವಕ್ಕೆ ಪಾತ್ರರಾಗಲಿದ್ದಾರೆ.
ಈ ವರ್ಷ ಗೋಲ್ಡ್ ಕೋಸ್ಟ್ ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಚೋಪ್ರಾ ಏಷ್ಯನ್ ಗೇಮ್ಸ್ ನಲ್ಲಿ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಲಿದ್ದಾರೆ ಎಂದು  ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ಘೋಷಣೆ ಮಾಡಿದರು.
ಫಿನ್ ಲ್ಯಾಂಡಿನಲ್ಲಿ ನಡೆದ ಸಾವೋ ಗೇಮ್ಸ್ ನಲ್ಲಿ 85.69ಮೀಟರ್ ದೂರಕ್ಕೆ ಜಾವೆಲಿನ್ ಎಸೆತ ನಡೆಸುವ ಮುಲಕ ಚೈನೀಸ್ ತೈಪೆಯ ತನ್ನ ಎದುರಾಳಿಯನ್ನು ಮಣಿಸಿದ್ದ ಚೋಪ್ರಾ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ. ಚೋಪ್ರಾ ಕಳೆದ ಮೇ ನಲ್ಲಿ ದೋಹಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ  87.43 ಮೀಟರ್ ದೂರ ಎಸೆಯುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com