ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಬೆಳ್ಳಿ, ಟ್ರ್ಯಾಪ್ ಶೂಟಿಂಗ್ ನಲ್ಲಿ ಲಕ್ಷಯ್ ಗೆ ರಜತ

Published On :
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯಲ್ಲಿ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಬೆಳ್ಳಿ ಪದಕ ಲಭಿಸಿದೆ.
ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ ಲಕ್ಷಯ್ ಶಿಯೊರಾನ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಲಕ್ಷಯ್ ಒಟ್ಟು 50 ಪಾಯಿಂಟ್ ಗಳಲ್ಲಿ 43 ಪಾಯಿಂಟ್ ಗಳಿಸುವುದರೊಡನೆ ರಜತ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
ಇದೇ ವಿಭಾಗದಲ್ಲಿ ಭಾರತದ ಮಾನವ್ಜಿತ್ ಸಿಂಗ್ ಸಿಧು ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಸ್ಪರ್ಧೆಯಲ್ಲಿ ಚೈನಾ ತೈಪೆಯ ಯಾಂಗ್ ಕುನ್ಪಿ ಚಿನ್ನದ ಪದಕ ಗಳಿಸಿಕೊಂಡರು.
ಇದಕ್ಕೂ ಮುನ್ನ ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತದ ದೀಪಕ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಒಂದು ಕಂಚಿನೊಡನೆ ನಾಲ್ಕು ಪದಕ ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
silver medalಬೆಳ್ಳಿ ಪದಕAsian Games 2018ಏಷ್ಯನ್ ಗೇಮ್ಸ್ 2018Lakshay Sheorantrap shootingಲಕ್ಷಯ್ ಶಿಯೊರಾನ್ಟ್ರ್ಯಾಪ್ ಶೂಟಿಂಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


