ರೊನಾಲ್ಡೊ ಕೇರಳ ಪ್ರವಾಹ ಸಂತ್ರಸ್ತರ ನೆರವಿಗೆ ನಿಂತು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 77 ಕೋಟಿ ದೇಣಿಗೆ ನೀಡಿದ್ದಾರೆಯೇ ಎಂದು ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂಬುದು ಸಾಬೀತಾಗಿದೆ. ರೊನಾಲ್ಡೊ ಅವರ ಅಧಿಕೃತ ಟ್ವೀಟರ್, ಫೇಸ್ ಬುಕ್, ಇನ್‌ಸ್ಟಾಗ್ರಾಂ ಪರಿಶೀಲಿಸಿದಾಗ 77 ಕೋಟಿ ರುಪಾಯಿ ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡಿದ ಯಾವುದೇ ಮಾಹಿತಿಯ ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇರಲಿಲ್ಲ.