ದಾಖಲೆಯ 6ನೇ ಆಸ್ಟ್ರೇಲಿಯಾ ಓಪನ್ ಗೆದ್ದ ರೋಜರ್ ಫೆಡರರ್

ಸ್ವಿಜರ್ಲೆಂಡ್ ನ ಸ್ಟಾರ್ ಟೆನಿಸ್ ಆಟಗಾರ ರೋಜರ್ ಫೆಡರರ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ...
ರೋಜರ್ ಫೆಡರರ್
ರೋಜರ್ ಫೆಡರರ್
Updated on
ಮೆಲ್ಬರ್ನ್: ಸ್ವಿಜರ್ಲೆಂಡ್ ನ ಸ್ಟಾರ್ ಟೆನಿಸ್ ಆಟಗಾರ ರೋಜರ್ ಫೆಡರರ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 
ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 2 ಆಟಗಾರ ಫೆಡರರ್ ಕ್ರೊಯೇಷ್ಯಾದ ಮರಿನ್ ಸಿಲಿಕ್ ವಿರುದ್ಧ 6-2, 6-7, 6-3, 3-6, 6-1 ಅಂತರದಲ್ಲಿ ಅಮೋಘ ಗೆಲುವು ದಾಖಲಿಸಿದರು. 
ಈ ಮೂಲಕ ದಾಖಲೆಯ ಆರನೇ ಆಸ್ಟ್ರೇಲಿಯಾ ಓಪನ್ ಹಾಗೂ 20ನೇ ಗ್ರ್ಯಾನ್ ಸ್ಲಾಮ್ ಕಿರೀಟ ಮುಡಿಗೇರಿಸಿಕೊಂಡರು. ಅಲ್ಲದೆ ಸತತ ಎರಡನೇ ಬಾರಿಗೆ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com