ಮರಿಯಾ ಶರಪೋವಾ - ಸೆರೆನಾ ವಿಲಿಯಮ್ಸ್
ಕ್ರೀಡೆ
ಗಾಯದ ಸಮಸ್ಯೆ: ಫ್ರೆಂಚ್ ಓಪನ್ ನಿಂದ ಹೊರ ನಡೆದ ಸೆರೆನಾ ವಿಲಿಯಮ್ಸ್
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅಮೆರಿಕದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಅವರು ಸೋಮವಾರ...
ಪ್ಯಾರಿಸ್: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅಮೆರಿಕದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಅವರು ಸೋಮವಾರ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಿಂದ ಹೊರ ನಡೆದಿದ್ದಾರೆ.
ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದ 36 ವರ್ಷದ ಸೆರೆನಾ ರಷ್ಯಾದ ಆಟಗಾರ್ತಿ ಮರಿಯಾ ಶರಪೋವಾ ವಿರುದ್ಧ ಸೆಣಸಲಿದ್ದರು. ಆದರೆ, ಎದೆ ಭಾಗದ ಸ್ನಾಯು ಸೆಳೆತದಿಂದಾಗಿ ಟೂರ್ನಿಯಿಂದ ನಿರ್ಗಮಿಸುವ ನಿರ್ಧಾರ ಪ್ರಕಟಿಸಿದ್ದಾರೆ.
23 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ಅವರು ಹೆರಿಗೆ ರಜೆ ಮುಗಿಸಿ ಫ್ರೆಂಚ್ ಓಪನ್ ಗಾಗಿ ಸಾಕಷ್ಟು ಶ್ರಮ ವಹಿಸಿದ್ದರು.
ನಿನ್ನೆ ನಡೆದಿದ್ದ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಸೆರೆನಾ ವಿಲಿಯಮ್ಸ್ ಮತ್ತು ವೀನಸ್ ವಿಲಿಯಮ್ಸ್ ಸೋಲು ಅನುಭವಿಸಿದ್ದರು.


