ಚಾಂಪಿಯನ್ಸ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತ ಕಾಳಗ!

ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಯಲ್ಲಿ ಕಳಪೆ ಪ್ರದರ್ಶನದ ಬಳಿಕ ಇದೀಗ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೇಲೆ ಕಣ್ಣೀಟ್ಟಿರುವ ಭಾರತ ಆರಂಭಿಕ ಪಂದ್ಯದಲ್ಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬ್ರೆಡಾ: ಕಾಮನ್ವೆಲ್ತ್ ಗೇಮ್ಸ್ ಪಂದ್ಯಾವಳಿಯಲ್ಲಿ ಕಳಪೆ ಪ್ರದರ್ಶನದ ಬಳಿಕ ಇದೀಗ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೇಲೆ ಕಣ್ಣೀಟ್ಟಿರುವ ಭಾರತ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಾಳೆ ಸೆಣೆಸಲಿದೆ. 
ಕಳೆದ 36 ಆವೃತ್ತಿಯಲ್ಲಿ ಏಷ್ಯಾನ್ ಚಾಂಪಿಯನ್ಸ್ ಭಾರತ ಒಂದೇ ಒಂದು ಬಾರಿ ಸಹ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲೇಬೇಕು ಎಂಬ ಹಠದಲ್ಲಿದೆ ಭಾರತ ಹಾಕಿ ತಂಡ. 
2016ರಲ್ಲಿ ಲಂಡನ್ ನಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಭಾರತ ರನ್ನರ್ ಅಪ್ ಆಗಿತ್ತು. 
ಎಂಟು ಬಾರಿ ಒಲಿಂಪಿಕ್ ನಲ್ಲಿ ಚಾಂಪಿಯನ್ ಆಗಿದ್ದ ಭಾರತ ಗೋಲ್ಡ್ ಕೋಸ್ಟ್ ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 
ಚಾಂಪಿಯನ್ಸ್ ಟ್ರೋಫಿಯಲ್ಲಿ ಆರು ತಂಡಗಳು ಭಾಗವಹಿಸುತ್ತಿದ್ದು ಒಲಿಂಪಿಕ್ ಚಾಂಪಿಯನ್ ತಂಡ ಅರ್ಜೇಂಟೀನಾ, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್, ಪಾಕಿಸ್ತಾನ ಹಾಗೂ ಭಾರತ ತಂಡಗಳು ಸೆಣೆಸಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com