ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ಸನ್ಮಾನ !

ಪ್ರಧಾನಿ ನರೇಂದ್ರ ಮೋದಿ ಅವರಿಂದು ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಏಷ್ಯನ್ ಪ್ಯಾರಾ ಗೇಮ್ಸ್  ಪದಕ ವಿಜೇತರನ್ನು ಭೇಟಿ ಮಾಡಿ ಸನ್ಮಾನಿಸಿದರು.

ಈ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಪದಕ ವಿಜೇತರನ್ನು ಭೇಟಿ ಮಾಡಿದದ್ದು, ತಮ್ಮಗೆ ಅತೀವ ಸಂತಸವನ್ನುಂಟುಮಾಡಿದೆ ಎಂದರು.

ಅಂಗ ವೈಕಲ್ಯ ಹೊಂದಿದ್ದರೂ  ದೇಶಕ್ಕೆ ಪದಕ ತಂದುಕೊಟ್ಟು ಕ್ರೀಡಾಪಟುಗಳ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಿ, ಈ  ಯಶಸ್ಸಿನ ಹಿಂದೆ ಅವರ  ಆತ್ಮಸ್ಥೈರ್ಯ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಜಾಗತಿಕ ವೇದಿಕೆಯಲ್ಲಿ ಭಾರತದ ಶಕ್ತಿಯುತ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ  ಕ್ರೀಡಾಪಟುಗಳ  ಕೊಡುಗೆಗೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು. ಪದಕ ವಿಜೇತರ ತರಬೇತುದಾರರ ಕಾರ್ಯಕ್ಕೂ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ರೀಡಾಪಟುಗಳು ತಮ್ಮ ಸ್ಪೂರ್ತಿಯನ್ನು ಹೀಗೆಯೇ ಉಳಿಸಿಕೊಂಡು ಮುಂದೆ ಇನ್ನೂ ಎತ್ತರದ ರೀತಿಯಲ್ಲಿ ಗುರಿ ಸಾಧಿಸುವಂತೆ  ನರೇಂದ್ರ ಮೋದಿ ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com