ಸಚಿನ್ ಅಂದ್ರೆ ತುಂಬಾ ಇಷ್ಟ, ಈಗ ವಿರಾಟ್ ಕೊಹ್ಲಿ ಅಂದ್ರೆ ಪಂಚಪ್ರಾಣ: ಆಸ್ಟ್ರೇಲಿಯಾ ಫುಟ್ಬಾಲ್ ತಾರೆ ಟಿಮ್

Published On :
ಕೋಲ್ಕತ್ತಾ: ಕ್ರಿಕೆಟ್ ಲೋಕದಲ್ಲಿ ಐತಿಹಾಸಿಕ ದಾಖಲೆಗಳ ಮೂಲಕ ತನ್ನದೇ ಆದ ಛಾಪು ಮೂಡಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು ಆಸ್ಟ್ರೇಲಿಯಾದ ಫುಟ್ಬಾಲ್ ದಿಗ್ಗಜ ಟಿಮ್ ಕಾಹಿಲ್ ಹೇಳಿದ್ದಾರೆ.
ನಾನು ಕ್ರಿಕೆಟ್ ಅನ್ನು ಪ್ರೀತಿಸುತ್ತೇನೆ. ಸಚಿನ್ ತೆಂಡೂಲ್ಕರ್ ನನ್ನ ಸಾರ್ವಕಾಲಿಕ ಮೆಚ್ಚಿನ ಆಟಗಾರ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಕಷ್ಟದ ನಡುವೆ ಕ್ರಿಕೆಟ್ ನಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿರುವ ವಿರಾಟ್ ಕೊಹ್ಲಿ ಅದರೆ ನನಗೆ ಪಂಚಪ್ರಾಣ ಎಂದು ಹೇಳಿದ್ದಾರೆ.
ಇಂಡಿಯನ್ ಸೂಪರ್ ಲೀಗ್ ನಲ್ಲಿ ಜೆಮ್‌ಶೆಡ್‌ಪುರ್ ಫುಟ್ಬಾಲ್ ಕ್ಲಬ್ ಪರ ಆಡುತ್ತಿರುವ ಟಿಮ್ ಕಾಹಿಲ್ ವಿರಾಟ್ ಕೊಹ್ಲಿಯನ್ನು ಹೊಗಳಿದ್ದಾರೆ. ಕೊಹ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ವಿನಮ್ರ ವ್ಯಕ್ತಿ, ಅವರು ಬಹಳಷ್ಟು ತ್ಯಾಗ ಮಾಡಿದ್ದಾರೆ ಮತ್ತು ತಮ್ಮ ಬಯಕೆಗೆ ಬದ್ಧರಾಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
FootballSachin Tendulkarಸಚಿನ್ ತೆಂಡೂಲ್ಕರ್ಫುಟ್ಬಾಲ್ಆಸ್ಟ್ರೇಲಿಯಾAustraliaVirat Kohliವಿರಾಟ್ ಕೊಹ್ಲಿFanಅಭಿಮಾನಿTim Cahillಟಿಮ್ ಕಾಹಿಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


