ಸೌರಬ್ ಚೌದರಿ
ಕ್ರೀಡೆ
ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿದ 16 ವರ್ಷದ ಸೌರಬ್
ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ಸೌರಬ್ ಚೌದರಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ನವದೆಹಲಿ: ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ಸೌರಬ್ ಚೌದರಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
16 ವರ್ಷದ ಸೌರಬ್ ಚೌದರಿ, 10 ಮೀಟರ್ ಏರ್ ಪಿಸ್ತೂಲ್ ಪುರುಷರ ವಿಭಾಗದಲ್ಲಿ ಒಟ್ಟಾರೇ 245 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರು.
ಸೆರ್ಬಿಯಾದ ಡಾಮಿ ಮೈಕೆಕ್ 239. 3 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಪಡೆದರೆ, ಚೀನಾದ ವೈ ಪಾಂಗ್ 215.2 ಅಂಕಗಳೊಂದಿಗೆ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಬೆಳ್ಳಿ ಪದಕ ವಿಜೇತ ಡಾಮಿ ಮೈಕೆಕ್ ಅವರ ವಿರುದ್ಧ ಪ್ರಾಬಲ್ಯ ಸಾಧಿಸಿದ ಸೌರಬ್ 5.7 ಅಂಕಗಳೊಂದಿಗೆ ಪಂದ್ಯ ಮುಕ್ತಾಯಗೊಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ