ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ 4ನೇ ಆವೃತ್ತಿಯಲ್ಲಿ ಬೆಂಗಳೂರು ರ್ಯಾಪ್ಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಕಿದಂಬಿ ಶ್ರೀಕಾಂತ್ ನೇತೃತ್ವದ ಬೆಂಗಳೂರು ತಂಡ 4-3 ಅಂತರದಲ್ಲಿ ಮುಂಬೈ ರಾಕೆಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ ಚೊಚ್ಚಲ ಬಾರಿಗೆ ಪಿಬಿಎಲ್ ಪ್ರಶಸ್ತಿ ಎತ್ತಿಹಿಡಿಯಿತು.