ಕ್ರೀಡೆ

ಟೋಕಿಯೋ ಒಲಿಂಪಿಕ್ಸ್ ರಾಯಭಾರಿ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ ಮೇರಿ ಕೋಮ್

ಟೋಕಿಯೋ ಒಲಿಂಪಿಕ್ಸ್ ರಾಯಭಾರಿ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ ಮೇರಿ ಕೋಮ್
ಎಂಸಿ ಮೇರಿ ಕೋಮ್
Published On :

ನವದೆಹಲಿ: ಮುಂದಿನ ವರ್ಷ ಟೋಕಿಯೊ ಒಲಿಂಪಿಕ್ಸ್‌ನ 10 ಅನುಭವಿ ಅಥ್ಲೀಟ್ ರಾಯಭಾರಿಗಳ ಪಟ್ಟಿಯಲ್ಲಿ ಭಾರತದ ಸ್ಟಾರ್ ಮಹಿಳಾ ಬಾಕ್ಸರ್ ಎಂಸಿ ಮೇರಿ ಕೋಮ್ ಸ್ಥಾನ ಪಡೆದಿದ್ದಾರೆ.

ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಕ್ರೀಡಾ ಕಾರ್ಯ ಪಡೆಯ ಪರ ಬಾಕ್ಸರ್ ಗಳನ್ನು ಪ್ರತಿನಿಧಿಸಲಿದ್ದಾರೆ. ಅಲ್ಲದೆ, ಮೇರಿ ಕೋಮ್ ಕೂಟದಲ್ಲಿ ಏಷ್ಯಾದ ಕ್ರೀಡಾಪಟುಗಳನ್ನು ಪ್ರತಿನಿಧಿಸಲಿದ್ದಾರೆ.

ಮಣಿಪುರದವರಾದ ಮೇರಿ ಅವರಿಗೆ ಟೋಕಿಯೋ ಒಲಿಂಪಿಕ್ -2020 ಕ್ರೀಡಾಕೂಟದಲ್ಲಿ ಈ ಗೌರವ ದೊರಕಿರುವುದು ಭಾರತೀಯ ಬಾಕ್ಸಿಂಗ್ ಕ್ಷೇತ್ರ ಮಾತ್ರವಲ್ಲದೆ ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆಯ ಸಂಗತಿಯಾಗಿದೆ.

ವಿಶ್ವ ಬಾಕ್ಸಿಂಗ್ ಕ್ಷೇತ್ರದಲ್ಲಿ ಅತ್ಯಂತ ಯಶಸ್ವಿಯಾಗಿರುವ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರನ್ನು ಒಲಂಪಿಕ್ಸ್ ಅಥ್ಲೆಟಿಕ್ಸ್ ರಾಯಭಾರಿಗಳ ಹತ್ತು ಸದಸ್ಯರ ತಂಡದಲ್ಲಿ ಮೇರಿಯವರಿಗೆ ಸ್ಥಾನ ಲಭಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.