ಇಂಡೋನೇಷಿಯಾ ಮಾಸ್ಟರ್ಸ್: ಸೆಮಿಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್

ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.
ಸೈನಾ ನೆಹ್ವಾಲ್
ಸೈನಾ ನೆಹ್ವಾಲ್
ಜಕಾರ್ತಾ: ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಸೈನಾ ಥೈಲ್ಯಾಂಡಿನ  ಪೊರ್ನಾಪಾಯಿ ಚೋಚುವಾಂಗ್ ವಿರುದ್ಧ 21-7, 21-18 ಸೆಟ್ ಗಳಿಂದ ಗೆಲುವು ಸಾಧಿಸಿ ಸೆಮಿಫೈನಲ್ ಸುತ್ತಿಗೇರಿದ್ದಾರೆ.
ಪರುಪ್ಪಳ್ಳಿ ಕಶ್ಯಪ್ ಅವರನ್ನು ವಿವಾಹವಾಗಿದ್ದ ಸೈನಾ ಮತ್ತೆ ಬ್ಯಾಡ್ಮಿಂಟನ್ ಲೋಕದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ.
ಇನ್ನೊಂದೆಡೆ ಇದೇ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಭಾರತದ ಕಿಡಂಬಿ ಶ್ರೀಕಾಂತ್ ಮತ್ತು ಪಿವಿ ಸಿಂಧೂ ಸಹ ಮುಂದಿನ ಸುತ್ತಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com