ಕಾಮನ್‍ವೆಲ್ತ್ ರಾಷ್ಟ್ರಗಳಿಗೆ ಕ್ರಿಕೆಟ್ ತರಬೇತಿ ಶಿಬಿರ

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ವತಿಯಿಂದ 16 ವಯೋಮಿತಿ ಬಾಲಕರಿಗೆ  ಕ್ರಿಕೆಟ್ ತರಬೇತಿ ಶಿಬಿರವನ್ನು ಕಾಮನ್ವೆಲ್ತ್ ರಾಷ್ಟ್ರಗಳ 16 ವಯೋಮಿತಿ ಬಾಲಕರಿಗಾಗಿ ಆಯೋಜಿಸಲಾಗಿದೆ. 
ಕಾಮನ್‍ವೆಲ್ತ್ ರಾಷ್ಟ್ರಗಳಿಗೆ ಕ್ರಿಕೆಟ್ ತರಬೇತಿ ಶಿಬಿರ
ಕಾಮನ್‍ವೆಲ್ತ್ ರಾಷ್ಟ್ರಗಳಿಗೆ ಕ್ರಿಕೆಟ್ ತರಬೇತಿ ಶಿಬಿರ

ನವದೆಹಲಿ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ವತಿಯಿಂದ 16 ವಯೋಮಿತಿ ಬಾಲಕರಿಗೆ  ಕ್ರಿಕೆಟ್ ತರಬೇತಿ ಶಿಬಿರವನ್ನು ಕಾಮನ್ವೆಲ್ತ್ ರಾಷ್ಟ್ರಗಳ 16 ವಯೋಮಿತಿ ಬಾಲಕರಿಗಾಗಿ ಆಯೋಜಿಸಲಾಗಿದೆ. 

ಕರ್ನಾಟಕ ರಾಜಧಾನಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅ. 1 ರಿಂದಲೇ ಶಿಬಿರ ಆರಂಭವಾಗಿದ್ದು, ಅ. 30 ರಂದು ಅಂತ್ಯವಾಗಲಿದೆ. 16 ಕಾಮನ್‍ವೆಲ್ತ್ ರಾಷ್ಟ್ರಗಳಿಂದ 18 ಬಾಲಕರು ಹಾಗೂ 17 ಬಾಲಕಿಯರು ಸೇರಿ ಒಟ್ಟು 35 ಮಂದಿ ಶಿಬಿರದಲ್ಲಿ ಭಾಗವಹಿಸಿದ್ದಾರೆ. 

2018 ರ ಏಪ್ರಿಲ್‌ನಲ್ಲಿ ಲಂಡನ್‌ನಲ್ಲಿ ನಡೆದ ಕಾಮನ್‌ವೆಲ್ತ್ ಮುಖ್ಯಸ್ಥರ ಸರ್ಕಾರದ ಸಭೆಯಲ್ಲಿ (ಸಿಎಚ್‌ಒಜಿಎಂ) ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಪ್ರಕಟಣೆಗೆ ಅನುಸಾರವಾಗಿ ಈ ರೀತಿಯ ಕೋಚಿಂಗ್ ಕ್ಯಾಂಪ್ ನಡೆಸಲಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಪ್ರಾಯೋಜಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com