ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚೊಚ್ಚಲ ಪದಕ ಗೆದ್ದ ವಿನೇಶ್‌ ಫೊಗಾಟ್‌!

ಏಷ್ಯನ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್‌ ಫೊಗಾಟ್‌ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ.
ವಿನೇಶ್ ಪೊಗಟ್
ವಿನೇಶ್ ಪೊಗಟ್

ನೂರ್-ಸುಲ್ತಾನ್ (ಕಜಾಕ್ ಸ್ತಾನ): ಏಷ್ಯನ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್‌ ಫೊಗಾಟ್‌ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ. 

ಗ್ರೀಸ್ ನ ಕುಸ್ತಿಪಟು ಮರಿಯಾ ಪ್ರಿವೊಲಾರ್ಕಿ ಅವರನ್ನು 4-1 ಅಂತರದಿಂದ ಸೋಲಿಸಿದರು. ಈ ಮೂಲಕ ವಿಶ್ವಚಾಂಪಿಯನ್ ಶಿಪ್ ನಲ್ಲಿ ಪದಕ ಜಯಿಸಿದ ನಾಲ್ಕನೇ ಮಹಿಳಾ ಕುಸ್ತಿಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಮೂಲಕ ಭಾರತದ ಮುಂಚೂಣಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರು 53 ಕೆ.ಜಿ ವಿಭಾಗದಲ್ಲಿ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಂದಿನ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ದೇಶದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಭಾಜನರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com