ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಭಾರತ ಇತ್ತೀಚಿನ ದಿನಗಳಲ್ಲಿ ಅನೇಕ ಖ್ಯಾತನಾಮರನ್ನು ಕಳೆದುಕೊಂಡಿದೆ. ಸೋಮವಾರ ಈ ಸಾಲಿಗೆ ಮತ್ತೊಂದು ಹೆಸರು ಸೇರ್ಪಡೆಯಾದೆ. ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ ತಮ್ಮ 42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.
ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.
ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು ನೀಡಿತು.
ಎರಡು ವರ್ಷಗಳ ಹಿಂದೆ ಕೇರಳದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿತ್ತು.
ಪೂರ್ಣಿಮಾ ಭಾರತಕ್ಕಾಗಿ ಎಸ್‌ಎಎಫ್ ಗೇಮ್ಸ್, ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಚಾಂಪಿಯನ್‌ಶಿಪ್ ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


