ಕ್ರೀಡೆ

ಪಿವಿ ಸಿಂಧು ಮುಡಿಗೆ ಬಿಬಿಸಿ ಗರಿ, ಪಿಟಿ ಉಷಾ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ!

ಪಿವಿ ಸಿಂಧು ಮುಡಿಗೆ ಬಿಬಿಸಿ ಗರಿ, ಪಿಟಿ ಉಷಾ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ!
ಪಿವಿ ಸಿಂಧು
Published On :

ನವದೆಹಲಿ: ಒಲಿಂಪಿಕ್ ಬೆಳ್ಳಿ ವಿಜೇತ ಮತ್ತು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ.ವಿ ಸಿಂಧು ಅವರನ್ನು ವರ್ಷದ ಬಿಬಿಸಿ ಭಾರತೀಯ ಕ್ರೀಡಾಪಟು ಎಂದು ಆಯ್ಕೆ ಮಾಡಲಾಗಿದೆ. ಪಿಟಿ ಉಷಾ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿದೆ.

ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಭಾನುವಾರ ರಾತ್ರಿ ನಡೆದ ಭವ್ಯ ಸಮಾರಂಭದಲ್ಲಿ ವಿಜೇತ ಸಿಂಧು ಹೆಸರನ್ನು ಘೋಷಿಸಿದರು. ಬಿಬಿಸಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಪ್ರಾರಂಭಿಸಿದೆ. ಅಂತಿಮ ಸುತ್ತಿಗೆ ದುತಿ ಚಂದ್, ಆರು ಬಾರಿ ವಿಶ್ವ ಚಾಂಪಿಯನ್ ಬಾಕ್ಸರ್ ಎಂಸಿ ಮೇರಿ ಕೋಮ್, ವಿಶ್ವ ಚಾಂಪಿಯನ್ ಶಿಪ್ ಕಂಚಿನ ಪದಕ ವಿಜೇತೆ ವಿನೇಶ್ ಫೋಗಾಟ್, ಪ್ಯಾರಾ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಮಾನ್ಸಿ ಜೋಶಿ ಸ್ಪರ್ಧೆಯಲ್ಲಿದ್ದರು.

ಸಿಂಧು 2019 ರಲ್ಲಿ ಸ್ವಿಟ್ಜರ್ಲೆಂಡ್ ನಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್ ಗೆದ್ದರು ಮತ್ತು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು(ಪುರುಷ ಅಥವಾ ಸ್ತ್ರೀ) ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಬಿಬಿಸಿ ಪ್ರಶಸ್ತಿಯ ಬಗ್ಗೆ ಮಾತನಾಡಿದ ಸಿಂಧು, ನಾನು ವರ್ಷದ ಬಿಬಿಸಿ ಭಾರತೀಯ ಕ್ರೀಡಾಪಟು ಪ್ರಶಸ್ತಿ ಸಂದಿರುವುದು ಖುಷಿ ನೀಡಿದೆ. ಈ ಅದ್ಭುತ ಪ್ರಶಸ್ತಿ ನೀಡಿದ್ದಕ್ಕಾಗಿ ನಾನು ಬಿಬಿಸಿ ಇಂಡಿಯಾಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನನ್ನ ಅಭಿಮಾನಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

ಸಿಂಧು ಐದು ವಿಶ್ವ ಚಾಂಪಿಯನ್ ಶಿಪ್ ಪದಕಗಳನ್ನು ಹೊಂದಿದ್ದಾರೆ. ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.