ಭಾರತದ ಹಾಕಿ ದಂತ ಕತೆ ಬಲ್ಬೀರ್ ಸಿಂಗ್ ವಿಧಿವಶ

ಮೂರು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನ ಜಯಿಸಿದ ಹಾಗೂ ಭಾರತದ ಹಾಕಿ ತಂಡದ ಸದಸ್ಯರಾಗಿದ್ದ ಬಲ್ಬೀರ್ ಸಿಂಗ್ ಸೀನಿಯರ್ (96) ಅವರು ಸೋಮವಾರ ವಿಧಿವಶರಾಗಿದ್ದಾರೆ. 
ಬಲ್ಬೀರ್ ಸಿಂಗ್
ಬಲ್ಬೀರ್ ಸಿಂಗ್
Updated on

ನವದೆಹಲಿ: ಮೂರು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನ ಜಯಿಸಿದ ಹಾಗೂ ಭಾರತದ ಹಾಕಿ ತಂಡದ ಸದಸ್ಯರಾಗಿದ್ದ ಬಲ್ಬೀರ್ ಸಿಂಗ್ ಸೀನಿಯರ್ (96) ಅವರು ಸೋಮವಾರ ವಿಧಿವಶರಾಗಿದ್ದಾರೆ. 

ನ್ಯೂಮೋನಿಯಾದಿಂದ ಬಳಲುತ್ತಿದ್ದ ಬಲ್ಬೀರ್ ಸಿಂಗ್ ಅವರು ಪಂಜಾಬ್ ರಾಜ್ಯದ ಮೊಹಾಲಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಬಲ್ಬೀರ್ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಅಳವಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 

ಆಧುನಿಕ ಒಲಿಂಪಿಕ್ ಇತಿಹಾಸದ 196 ದಂತಕತೆಗಳಲ್ಲಿ ಒಬ್ಬರು ಎಂದು ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಬಲ್ಬೀರ್ ಸಿಂಗ್ ಅವರನ್ನು ಆಯ್ಕೆ ಮಾಡಿತ್ತು. ಈ ಗೌರವ ಪಡೆದ ಏಕಮಾತ್ರ ಭಾರತೀಯ ಎಂಬ ಹೆಗ್ಗಳಿಕೆ ಕೂಡ ಅವರದ್ದಾಗಿದೆ. ಭಾರತ ತಂಡ ಮೂರು ಬಾರಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಾಗ ಬಲ್ಬೀರ್ ಅವರು ಆಟವಾಡಿದ್ದರು. 

ಬಲ್ಬೀರ್ ಅವರು ಒಲಿಂಪಿಕ್ ಪುರುಷರ ಹಾಕಿ ಫೈನಲ್ ನಲ್ಲಿ ಗಳಿಸಿದ ವೈಯಕ್ತಿಕ ಗೋಲುಗಳು ದಾಖಲೆಯಾಗಿ ಉಳಿದಿದೆ. 1952ರ ಒಲಿಂಪಿಕ್ಸ್ ಹಾಕಿ ಫೈನಲ್ ನಲ್ಲಿ ನೆದರ್ ಲ್ಯಾಂಡ್ಸ್ ವಿರುದ್ಧ ಭಾರತ 6-1 ಗೋಲುಗಳಿಂದ ಜಯಗಳಿಸಿತ್ತು. ಈ ಪೈಕಿ 5 ಗೋಲು ಗಳಿಸಿದವರು ಬಲ್ಬೀರ್ ಸಿಂಗ್. 1957ರಲ್ಲಿ ಭಾರತ ವಿಶ್ವಕಪ್ ಜಯಿಸಿದಾಗ ಮತ್ತು 1971ರ ವಿಶ್ವಕಪ್ ನಲ್ಲಿ ಭಾರತ ತಂಡ ಕಂಚು ಪಡೆದಾಗ ಬಲ್ಬೀರ್ ತಂಡದ ಮುಖ್ಯ ಕೋಚ್ ಆಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com