ಎರಡನೇ ಮಹಾಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಕೊರೋನಾದ ಕಾರಣ ರದ್ದುಗೊಂಡ ವಿಂಬಲ್ಡನ್!

ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್ ಕೋವಿಡ್ -19 ಸಂಖ್ಯೆ ದಿನೇ ದಿನೆ ಏರುತ್ತಿರುವ ಹಿನ್ನೆಲೆಯಲ್ಲಿ ವರ್ಷದ ಮೂರನೇ ಗ್ರ್ಯಾನ್ ಸ್ಲ್ಯಾಮ್ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್ ರದ್ದುಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಂಡನ್: ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್ ಕೋವಿಡ್ -19 ಸಂಖ್ಯೆ ದಿನೇ ದಿನೆ ಏರುತ್ತಿರುವ ಹಿನ್ನೆಲೆಯಲ್ಲಿ ವರ್ಷದ ಮೂರನೇ ಗ್ರ್ಯಾನ್ ಸ್ಲ್ಯಾಮ್ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್ ರದ್ದುಗೊಂಡಿದೆ.

ಕೊರೊನಾ ಭೀತಿಯಿರುವ ಹಾನಿಯಿಂದಾಗಿ ಆಲ್ ಇಂಗ್ಲೆಂಡ್ ಲಾನ್ ಟೆನಿಸ್ ಕ್ಲಬ್ ಈ ನಿರ್ಧಾರ ತೆಗೆದುಕೊಳ್ಳಲು ಒತ್ತಾಯಿಸಲ್ಪಟ್ಟಿದೆ. ಎರಡನೇ ಮಹಾಯುದ್ಧದ ನಂತರ ಇದೇ ಮೊದಲ ಬಾರಿಗೆ ವಿಂಬಲ್ಡನ್ ಅನ್ನು ಮುಂದೂಡಲಾಗಿದೆ.

ವಿಶ್ವದ 200 ರಾಷ್ಟ್ರಗಳಲ್ಲಿ ಈ ಮಹಾಮಾರಿ ಕ್ರೌರ್ಯ ಮೆರೆಯುತ್ತಿದ್ದು, 45 ಸಾವಿರ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 9 ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದು 1.85 ಲಕ್ಷ ಮಂದಿ ಗುಣಮುಖರಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com