ಪಿಎಂ- ಕೇರ್ಸ್ ನಿಧಿಗೆ ಹೆಚ್ಚುವರಿಯಾಗಿ 75 ಲಕ್ಷ ದೇಣಿಗೆ ಪ್ರಕಟಿಸಿದ ಹಾಕಿ ಇಂಡಿಯಾ

ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ  ಪಿಎಂ- ಕೇರ್ಸ್ ನಿಧಿಗೆ ಹಾಕಿ ಇಂಡಿಯಾ ಇಂದು ಹೆಚ್ಚುವರಿಯಾಗಿ 75 ಲಕ್ಷ ರೂಪಾಯಿ ದೇಣಿಗೆಯನ್ನು ಪ್ರಕಟಿಸಿದೆ.
ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹ್ಮದ್
ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹ್ಮದ್

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ  ಪಿಎಂ- ಕೇರ್ಸ್ ನಿಧಿಗೆ ಹಾಕಿ ಇಂಡಿಯಾ ಇಂದು ಹೆಚ್ಚುವರಿಯಾಗಿ 75 ಲಕ್ಷ ರೂಪಾಯಿ ದೇಣಿಗೆಯನ್ನು ಪ್ರಕಟಿಸಿದೆ.

ಏಪ್ರಿಲ್ 1 ರಂದು ಹಾಕಿ ಇಂಡಿಯಾ 25 ಲಕ್ಷ ದೇಣಿಗೆಯನ್ನು ಪ್ರಕಟಿಸಿತ್ತು. ಆದಾಗ್ಯೂ, ಈ ಮೊತ್ತವನ್ನು ಹೆಚ್ಚುವರಿಯಾಗಿ 1 ಕೋಟಿಗೆ ಹೆಚ್ಚಿಸಲು ಹಾಕಿ ಇಂಡಿಯಾ ಕಾರ್ಯಕಾರಿ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ. 

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಎಲ್ಲ ರೀತಿಯಲ್ಲೂ ಹೋರಾಡುತ್ತಿರುವ ಭಾರತ ಸರ್ಕಾರದೊಂದಿಗೆ ಕೈ ಜೋಡಿಸಬೇಕಾಗಿದೆ ಎಂದು ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಷ್ತಾಕ್ ಅಹ್ಮದ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com