ಭಾರತದ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ನಿಧನ

ಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

Published: 30th April 2020 07:37 PM  |   Last Updated: 30th April 2020 07:37 PM   |  A+A-


Chuni Goswami

ಚುನಿ ಗೋಸ್ವಾಮಿ ನಿಧನ

Posted By : Srinivasamurthy VN
Source : UNI

ಕೋಲ್ಕತಾ: ಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

1962ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಭಾರತದ ತಂಡದ ಕ್ಯಾಪ್ಟನ್ ಆಗಿದ್ದ ಇವರು ಪಶ್ಚಿಮ ಬಂಗಾಳದ ಸ್ಥಳೀಯ ಕ್ರಿಕೆಟ್ ಪಂದ್ಯದಲ್ಲೂ ತಮ್ಮ ರಾಜ್ಯವನ್ನು ಪ್ರತಿನಿಧಿಸಿದ್ದರು. 

1957 ರಲ್ಲಿ ಅವರು ತಮ್ಮ ಅಂತಾರಾಷ್ಟ್ರೀಯ ಕ್ರೀಡಾಪಯಣ ಆರಂಭಿಸಿದ್ದು ರಾಷ್ಟ್ರ ತಂಡದ ನಾಯಕರಾಗಿದ್ದರು. 1964 ರಲ್ಲಿ ತಮ್ಮ 27 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿ ತಮ್ಮ ರಾಜ್ಯದಲ್ಲಿ ಕ್ರಿಕೆಟ್ ಪ್ರತಿನಿಧಿಸಿದರು. ಅವರು ಕಳೆದ ಕೆಲವು ದಿನಗಳಿಂದ ಸಕ್ಕರೆ  ಕಾಯಿಲೆ, ನರದೌರ್ಬಲ್ಯ ಸೇರಿದಂತೆ ಕೆಲವು ರೋಗಗಳಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಗುರುವಾರ ಸಂಜೆ 5 ಗಂಟೆಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

Stay up to date on all the latest ಕ್ರೀಡೆ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp