ಮನ್‌ಪ್ರೀತ್ ಸೇರಿ ಎಲ್ಲಾ ಹಾಕಿ ಆಟಗಾರರ ಕೋವಿಡ್ ವರದಿ ನೆಗೆಟಿವ್, ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಭಾರತ ಹಾಕಿ ತಡದ ನಾಯಕ ಮನ್‌ಪ್ರೀತ್ ಸಿಂಗ್ ಸೇರಿದಂತೆ ಆರು ಭಾರತೀಯ ಪುರುಷರ ಹಾಕಿ ತಂಡದ ಆಟಗಾರರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು ಸೋಮವಾರ ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮನ್‌ಪ್ರೀತ್ ಸಿಂಗ್
ಮನ್‌ಪ್ರೀತ್ ಸಿಂಗ್

ನವದೆಹಲಿ: ಭಾರತ ಹಾಕಿ ತಡದ ನಾಯಕ ಮನ್‌ಪ್ರೀತ್ ಸಿಂಗ್ ಸೇರಿದಂತೆ ಆರು ಭಾರತೀಯ ಪುರುಷರ ಹಾಕಿ ತಂಡದ ಆಟಗಾರರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು ಸೋಮವಾರ ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಮನ್‌ಪ್ರೀತ್, ರ್ ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್, ವರುಣ್ ಕುಮಾರ್, ಗೋಲ್ ಕೀಪರ್ ಕ್ರಿಶನ್ ಬಹದ್ದೂರ್ ಪಾಠಕ್  ಹಾಗೂ  ಸ್ಟ್ರೈಕರ್ ಮಂದೀಪ್ ಸಿಂಗ್ ಎರಡು ಬಾರಿ ಕೋವಿಡ್ ನೆಗೆಟಿವ್ ವರದಿ ಪಡೆದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರ ಆಪ್ತ ಮೂಲಗಳು ಹೇಳಿದೆ, . ಆಗಸ್ಟ್ 10 ಮತ್ತು 12 ರ ನಡುವೆ ಅವರು ಕೋವಿಡ್ ಸೋಂಕಿಗೆ ಧನಾತ್ಮಕ ಪರೀಕ್ಷೆ ನಡೆಸಿದರು.

"ಎಲ್ಲಾ ಹಾಕಿ ಆಟಗಾರರು ಕೋವಿಡ್ -19 ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಇಂದು ಸಂಜೆ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ. " ಮೂಲವು ಪಿಟಿಐಗೆ ತಿಳಿಸಿದೆ. ಲಕ್ಷಣರಹಿತವಾಗಿದ್ದರೂ, ರಕ್ತದ ಆಮ್ಲಜನಕದ ಮಟ್ಟದಲ್ಲಿ ಕುಸಿದ ನಂತರ ಮಂದೀಪ್ ಅವರನ್ನು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ಬೆಂಗಳೂರಿನ ಎಸ್‌ಎಸ್ ಸ್ಪರ್ಶ್  ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com