ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ನೆನೆದ ಪ್ರಧಾನಿ ಮೋದಿ, ಪುತ್ಥಳಿಗೆ ನಮನ ಸಲ್ಲಿಸಿದ ಕ್ರೀಡಾ ಸಚಿವರು

ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.

Published: 29th August 2020 02:01 PM  |   Last Updated: 29th August 2020 02:24 PM   |  A+A-


PM Narendra Modi and Sports minister Kiren Rijiju paid tribute to Major Dhyan Chand

ಪ್ರಧಾನಿ ನರೇಂದ್ರ ಮೋದಿ ಮತ್ತು ಧ್ಯಾನ್ ಚಂದ್ ಪುತ್ಥಳಿಗೆ ಗೌರವ ಸಲ್ಲಿಸಿದ ಕ್ರೀಡಾ ಸಚಿವ ಕಿರಣ್ ರಿಜಿಜು

Posted By : Sumana Upadhyaya
Source : PTI

ನವದೆಹಲಿ: ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.

1905ರ ಆಗಸ್ಟ್ 29ರಂದು ಜನಿಸಿದ್ದ ಧ್ಯಾನ್ ಚಂದ್ ಅವರು ಒಲಿಂಪಿಕ್ಸ್ ಗೇಮ್ ನಲ್ಲಿ ಮೂರು ಬಾರಿ ಭಾರತವನ್ನು ಪ್ರತಿನಿಧಿಸಿದ್ದರು.

ಇಂದು ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಇಂದು ಕ್ರೀಡಾ ದಿನದ ಅಂಗವಾಗಿ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ನಮನಗಳು, ಹಾಕಿ ಕೋಲಿನೊಂದಿಗಿನ ಅವರ ಮ್ಯಾಜಿಕ್ ನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಂದು ನಮ್ಮ ಕ್ರೀಡಾಪಟುಗಳಿಗೆ ಎಲ್ಲ ರೀತಿಯಿಂದಲೂ ಸಹಕರಿಸುವ ಅವರ ಕುಟುಂಬದವರು, ಕೋಚ್ ಗಳು, ಸಿಬ್ಬಂದಿಗಳನ್ನು ಸಹ ಪ್ರಶಂಸಿಸುವ ದಿನವಾಗಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಕ್ರೀಡಾ ಸಚಿವ ಕಿರಣ್ ರಿಜಿಜು, ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಧ್ಯಾನ್ ಚಂದ್ ಅವರ ಪುತ್ಥಳಿಗೆ ಹೂವಿನ ಹಾರ ಹಾಕಿ ನಮನ ಸಲ್ಲಿಸಿದರು.

ರಾಷ್ಟ್ರೀಯ ಕ್ರೀಡಾ ಪುರಸ್ಕಾರ ಪ್ರದಾನ: ಕೋವಿಡ್-19 ಹಿನ್ನೆಲೆಯಲ್ಲಿ ಇಂದು ವರ್ಚುವಲ್ ಸಮಾರಂಭ ಮೂಲಕ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಐವರು ಕ್ರೀಡಾಪಟುಗಳಿಗೆ ರಾಜೀವ್ ಖೇಲ್ ರತ್ನ ಮತ್ತು 27 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಸೇರಿದಂತೆ ಒಟ್ಟು 74 ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಇವರಲ್ಲಿ 60 ಕ್ರೀಡಾಪಟುಗಳು ವರ್ಚುವಲ್ ಸಮಾರಂಭವನ್ನು ದೇಶದ ವಿವಿಧ ಭಾಗಗಳಲ್ಲಿನ 11 ಕ್ರೀಡಾ ಪ್ರಾಧಿಕಾರ ಮೂಲಕ ಭಾಗವಹಿಸಿದ್ದಾರೆ.

Stay up to date on all the latest ಕ್ರೀಡೆ news
Poll
Union Finance Minister Nirmala Sitharaman along with BJP General Secretary Bhupendra Yadav and state party President Sanjay Jaiswal releases party manifesto

ಬಿಹಾರ ಚುನಾವಣೆ: ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವ ಬಿಜೆಪಿಯ ಪ್ರಣಾಳಿಕೆ ನೀತಿಗೆ ವಿರುದ್ಧವೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp