ಟೋಕಿಯೊ:ಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.
ಭಾನುವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಬಾಕ್ಸರ್ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸತೀಶ್ ಕುಮಾರ್ 0-5 ಅಂತರದಿಂದ ಸೋಲು ಕಂಡು ಆಟದಿಂದ ನಿರ್ಗಮಿಸಿದ್ದಾರೆ.
ಭಾರತದ ಹೆವಿವೇಟ್ ಬಾಕ್ಸರ್ ಸತೀಶ್ ಕುಮಾರ್ ಅವರಿಗೆ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ತಲೆಗೆ ತೀವ್ರ ಗಾಯವಾಗಿ ಹೊಲಿಗೆ ಹಾಕಲಾಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾಗವಹಿಸುವುದು ಅನುಮಾನವಾಗಿತ್ತು. ಆದರೆ ವೈದ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಕೊನೆ ಕ್ಷಣದಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡರು.
ಇದು ಸತೀಶ್ ಕುಮಾರ್ ಗೆ ಚೊಚ್ಚಲ ಒಲಿಂಪಿಕ್ ಗೇಮ್.
Advertisement