ಟೊಕಿಯೊ: 2019ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟೊಕಿಯೊ ಒಲಿಂಪಿಕ್ಸ್'ನ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ.
57 ಕೆಜಿ ವಿಭಾಗದ ಪುರುಷರ ಪ್ರೀಸ್ಟೈಲ್ ಕುಸ್ತಿ ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಕೊಲಂಬಿಯಾದ ಟೈಗ್ರೇರೋಸ್ ಉರ್ಬಾನೋ ಅವರನ್ನು ಮಣಿಸಿದ ಅವರು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆದರು.
ಇದಾದ ನಂತರ ಬಲ್ಗೇರಿಯಾದ ಜಾರ್ಜಿ ವ್ಯಾಂಗಲೋವ್ ಅವರನ್ನು ಕ್ವಾರ್ಟರ್ ಫೈನಲ್ನಲ್ಲಿ ರವಿ ಕುಮಾರ್ ದಹಿಯಾ ಎದುರಿಸಲಿದ್ದಾರೆ. ದಹಿಯಾ ಅವರಿಗಿದು ಸುಲಭ ಸವಾಲು ಎಂದು ಅಂದಾಜಿಸಲಾಗುತ್ತಿದೆ.
Advertisement