ಪ್ಯಾರಾಲಿಂಪಿಕ್ಸ್‌ ಟಿಟಿ: ಫೈನಲ್‌ಗೆ ಲಗ್ಗೆಯಿಟ್ಟ ಭವಿನಾ ಪಟೇಲ್‌

ಪ್ಯಾರಾಲಿಂಪಿಕ್ಸ್‌ನ ಟೇಬಲ್‌ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
ಭವಿನಾ ಪಟೇಲ್‌
ಭವಿನಾ ಪಟೇಲ್‌

ಟೊಕಿಯೋ: ಪ್ಯಾರಾಲಿಂಪಿಕ್ಸ್‌ನ ಟೇಬಲ್‌ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. 

ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್​ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು ಮಣಿಸಿ ಭಾರತೀಯ ಪ್ಯಾರಾ ಟೇಬಲ್​ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಆ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಸೆಮಿಫೈನಲ್​​​ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು 3-2 ಸೆಟ್​​ಗಳಿಂದ ಮಣಿಸಿದ ಅವರು ಫೈನಲ್ಸ್ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಪ್ಯಾರಾ ಟೆನ್ನಿಸ್‌ ಆಟಗಾರ್ತಿ ಹೊಸದೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com