ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಪದಕ ಬೇಟೆ ಮುಂದುವರೆದಿದೆ. ಭಾರತದ ಸುಮಿತ್ ಅಂತಿಲ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಫೈನಲ್ ನಲ್ಲಿ ಜಾವಲಿನ್ ಥ್ರೋನಲ್ಲಿ ಭಾರತದಿಂದ ಸುಮಿತ್ ಅಂತಿಲ್ ಮತ್ತು ಸಂದೀಪ್ ಭಾಗವಹಿಸಿದ್ದರು. ಆದರೆ ಸುಮಿತ್ ಅಂತಿಲ್ 68.55 ಮೀಟರ್ ದೂರಕ್ಕೆ ಥ್ರೋ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.
ಇನ್ನು ಸಂದೀಪ್ 62.20 ಮೀಟರ್ ದೂರಕ್ಕೆ ಥ್ರೋ ಎಸೆಯುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 7 ಪದಕಗಳು ಬಂದಿವೆ. 2 ಚಿನ್ನ, 4 ಬೆಳ್ಳಿ ಮತ್ತು 1 ಕಂಚಿನ ಪದಕ ಸೇರಿದೆ.
Advertisement