ಟೋಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯಲಿರುವ ಮೇರಿ ಕೋಮ್, ಮನ್‌ಪ್ರೀತ್ ಸಿಂಗ್
ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಕುಸ್ತಿಪಟು ಭಜರಂಗ್ ಪುನಿಯಾ ಆಗಸ್ಟ್ 8ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಧ್ವಜ ಧಾರಕರಾಗಲಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಈ ನಿರ್ಧಾರವನ್ನು ಕ್ರೀಡಾಕೂಟದ ಸಂಘಟನಾ ಸಮಿತಿಗೆ ತಿಳಿಸಿದೆ.
ಮೊದಲನೆಯದಾಗಿ, ಮುಂಬರುವ ಟೋಕಿಯೊ ಕ್ರೀಡಾಕೂಟದಲ್ಲಿ 'ಲಿಂಗ ಸಮಾನತೆ'ಯನ್ನು ಖಚಿತಪಡಿಸಿಕೊಳ್ಳಲು ಭಾರತವು ಒಂದು ಗಂಡು, ಮತ್ತು ಓರ್ವ ಮಹಿಳೆ ಇಬ್ಬರು ಧ್ವಜ ಧಾರಕರನ್ನು ಹೊಂದಿರಲಿದೆ ಎಂದು ಇತ್ತೀಚೆಗೆ ಐಒಎ ಮುಖ್ಯ ಮುಖ್ಯಸ್ಥ ನರಿಂದರ್ ಬಾತ್ರಾ ತಿಳಿಸಿದ್ದರು.
ರಿಯೊ ಡಿ ಜನೈರೊದಲ್ಲಿ ನಡೆದ 2016ರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ದೇಶದ ಏಕೈಕ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ಧ್ವಜಾರೋಹಣ ಮಾಡಿದರು.
ಟೋಕಿಯೊ ಕ್ರೀಡಾಕೂಟವು ಜುಲೈ 23 ರಂದು ಪ್ರಾರಂಭವಾಗಲಿದೆ. ಕ್ರೀಡಾಕೂಟದಲ್ಲಿ 100ಕ್ಕೂ ಹೆಚ್ಚು ಭಾರತೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕ್ರೀಡಾಕೂಟವನ್ನು ಒಂದು ವರ್ಷ ಮುಂದೂಡಲ್ಪಟ್ಟಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ