ಒಲಿಂಪಿಕ್ಸ್ ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ಪಿ.ವಿ.ಸಿಂಧು

ಟೋಕಿಯೊ ಒಲಂಪಿಕ್ಸ್ ನಲ್ಲಿ ಗೆಲುವಿನ ಓಟವನ್ನು ಮುಂದುವರಿಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ, ಹಾಲಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳೆಯರ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಪಿ.ವಿ.ಸಿಂಧು
ಪಿ.ವಿ.ಸಿಂಧು
Updated on

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಗೆಲುವಿನ ಓಟವನ್ನು ಮುಂದುವರಿಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ, ಹಾಲಿ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳೆಯರ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಪಿವಿ ಸಿಂಧು ಡೆನ್ಮಾರ್ಕ್'ನ ಬ್ಲೆಚ್‌ಫೆಲ್ಡ್ 21-15, 21-13 ನೇರ ಸೆಟ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗಿದ್ದ ಪಿವಿ ಸಿಂಧು ಮೊದಲ ಸೆಟ್ ನಲ್ಲಿ 21-15ರಲ್ಲಿ ಮುನ್ನಡೆ ಸಾಧಿಸಿದರು. ಬಳಿಕ 2ನೇ ಸೆಟ್ ನಲ್ಲಿ ನ್ಗಾನ್ ಯಿ ಚೆಯುಂಗ್ ಕೊಂಚ ವಿರೋಧ ತೋರಿದರಾದೂ 2ನೇ ಸೆಟ್ ಅನ್ನೂ ಕೂಡ ಸಿಂಧು 21-13 ಅಂತರದಲ್ಲಿ ತಮ್ಮದಾಗಿಸಿಕೊಂಡು ಜಯ ಸಾಧಿಸಿ ಟೂರ್ನಿಯ ಮುಂದಿನ ಹಂತಕ್ಕೆ ಮುನ್ನಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com