ಟೋಕಿಯೊ ಒಲಂಪಿಕ್ಸ್: ಪದಕದ ಭರವಸೆ ಮೂಡಿಸಿದ ಅತನು ದಾಸ್'ಗೆ ಸೋಲು!

ಈ ಬಾರಿಯ ಟೋಕಿಯೊ ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.
ಅತನು ದಾಸ್
ಅತನು ದಾಸ್
Updated on

ಟೋಕಿಯೊ: ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.

ಒಲಂಪಿಕ್ಸ್‌ ಕ್ರೀಡಾಕೂಟದ ಪುರುಷರ ವಿಭಾಗದ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಅತನು ದಾಸ್ ಪ್ರಿಕ್ವಾರ್ಟರ್‌ಫೈನಲ್​ನಲ್ಲಿ 2012ರ ಸಮ್ಮರ್​ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದ ಜಪಾನದ ತಕಹರು ಫುರುಕವಾ ಅವರ ವಿರುದ್ಧ 4-6 ಅಂತರದಿಂದ ಸೋಲನ್ನಪ್ಪಿದ್ದಾರೆ.

ಈ ಹಿಂದೆ ನಡೆದ ಪಂದ್ಯದಲ್ಲಿ ವೈಯಕ್ತಿಕ ರಿಕರ್ವ್​ ವಿಭಾಗದಲ್ಲಿ ಲಂಡನ್​ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ವಿಜೇತ ದಕ್ಷಿಣ ಕೊರಿಯಾದ ಓಹ್ ಜಿನ್ ಹಿಯೆಕ್ ವಿರುದ್ಧ 6-5ರ ಅಂತರದ ರೋಚಕ ಗೆಲುವು ಸಾಧಿಸಿ ಪ್ರಿಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.

ಇಂದು ದಾಸ್​ ಅವರು ತಕಹರು ಫುರುಕವಾ ವಿರುದ್ಧ 16ರ ಹಂತದ ಪಂದ್ಯದಲ್ಲಿ ಸೋಲನ್ನಪ್ಪಿದ್ದಾರೆ. ಈ ಮೂಲಕ ಪದಕದ ಭರವಸೆ ಮೂಡಿಸಿದ್ದ ದಾಸ್​ಗೆ ನಿರಾಸೆಯುಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com