ಕೊಲೆ ಪ್ರಕರಣ: ಸ್ಪೆಷಲ್ ಸೆಲ್ ಅಧಿಕಾರಿಗಳಿಂದ ರೆಸ್ಲರ್ ಸುಶೀಲ್ ಕುಮಾರ್ ಬಂಧನ; ದೆಹಲಿ ಪೊಲೀಸರು

ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ಹೇಳಿದ್ದಾರೆ.
ಸುಶೀಲ್ ಕುಮಾರ್
ಸುಶೀಲ್ ಕುಮಾರ್

ನವದೆಹಲಿ: ರೆಸ್ಲರ್ ಸಾಗರ್ ರಾಣಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಎದುರಿಸುತ್ತಿರುವ ರೆಸ್ಲರ್ ಸುಶೀಲ್ ಕುಮಾರ್ ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದ ದೆಹಲಿ ಪೊಲೀಸರು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ಹೇಳಿದ್ದಾರೆ.

ನಿನ್ನೆ ದೆಹಲಿ ಪೊಲೀಸರು ಸುಶೀಲ್ ಕುಮಾರ್ ರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಸುಶೀಲ್ ಕುಮಾರ್ ಅವರನ್ನು ಬಂಧಿಸಿರಲಿಲ್ಲ. ದೆಹಲಿ ಪೊಲೀಸರ ಒಂದು ತಂಡ ಪಂಜಾಬ್ ನಲ್ಲಿ ಬೀಡುಬಿಟ್ಟಿದ್ದು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ ಎಂದು ಹೇಳಿದ್ದಾರೆ. 

ಇಂದು ಅಧಿಕೃತ ಬಂಧನ
ಇನ್ನು ಸುಶೀಲ್ ಕುಮಾರ್ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿರುವುದಾಗಿ ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಸೆಲ್ ಅಧಿಕಾರಿಗಳು ಮಾಹಿತಿ ನೀಡಿದ್ದು, ವಿಶೇಷ ಸೆಲ್ ಅಧಿಕಾರಿ ನೀರಜ್ ಕುಮಾರ್ ಅವರ ತಂಡ ಸುಶೀಲ್ ಕುಮಾರ್ ಅವರನ್ನು ಬಂಧಿಸಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ಸ್‌ಪೆಕ್ಟರ್ ಶಿವಕುಮಾರ್, ಇನ್ಸ್‌ಪೆಕ್ಟರ್ ಕರಂಬೀರ್ ನೇತೃತ್ವದ ವಿಶೇಷ ಸೆಲ್ ಎಸ್‌ಆರ್ ತಂಡ ಮತ್ತು ಎಸಿಪಿ ಅತ್ತಾರ್ ಸಿಂಗ್ ಅವರ ಮೇಲ್ವಿಚಾರಣೆಯಲ್ಲಿ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಶೀಲ್ ಕುಮಾರ್ ಮತ್ತು ಅಜಯ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದೆ

ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ ಕೊಲೆಯಾಗಿದ್ದರು. ಸುಶೀಲ್ ಹಾಗೂ ಸಾಗರ್ ನಡುವಣ ಘರ್ಷಣೆಯಲ್ಲಿ ಸಾಗರ್ ಹತ್ಯೆಗೀಡಾಗಿದ್ದ ಎಂದು ಹೇಳಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ರನ್ನು ಬಂಧಿಸಲು ಪೊಲೀಸರು ತೀವ್ರ ಪ್ರಯತ್ನ ನಡೆಸಿದ್ದರು. ಕುಸ್ತಿಪಟು ಸುಶೀಲ್ ಕುಮಾರ್ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ, ಆತನ ಸಹಚರ ಅಜಯ್ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ ಬಹುಮಾನ ಕೂಡ ಘೋಷಿಸಿದ್ದರು.

ಮತ್ತೊಂದು ಕಡೆ ಕಳೆದ ವಾರ ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ವಜಾಗೊಳಿಸಿತ್ತು. ತಲೆಮರೆಸಿಕೊಂಡಿದ್ದ ಸುಶೀಲ್ ಎರಡು ದಿನಗಳ ಹಿಂದೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಮೀರತ್ ಟೋಲ್ ಪ್ಲಾಜಾದಲ್ಲಿದ್ದ ಕ್ಯಾಮೆರಾಗಳು ಸೆರೆ ಹಿಡಿದಿದ್ದವು, ಈ ಪೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಇದರ ಆಧಾರದ ಮೇಲೆ ದೆಹಲಿ ಪೊಲೀಸರು ಸುಶೀಲ್ ಅವರ ಶೋಧನೆ ಮುಂದುವರೆಸಿ, ಪಂಜಾಬ್ ಗೆ ತೆರಳಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com