ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಶೂಟಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ.
ಹೌದು.. ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನದ ಪದಕಕ್ಕೆ ಮುತ್ತಿಟ್ಟರೆ, ಸಿಂಗರಾಜ್ 2ನೇ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಭಾರತದ ಮನೀಶ್ ನರ್ವಾಲ್ 218.2 ಅಂಕಗಳನ್ನು ಗಳಿಸಿ ಮೊದಲ ಸ್ಥಾನ ಪಡೆದಿದ್ದು, ಇದು ಭಾರತದ ಪರ ಗರಿಷ್ಠ ದಾಖಲೆ ಕೂಡ ಆಗಿದೆ. ಅದೇ ಪಂದ್ಯದಲ್ಲಿ ಭಾರತದ ಮತ್ತೋರ್ವ ಶೂಟರ್ ಅಧನ ಸಿಂಗರಾಜ್ ಅವರು 216.7 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಒಂದೇ ಪೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಈ ಪದಕಗಳ ಮೂಲಕ ಹಾಲಿ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಚಿನ್ನ 3, ಬೆಳ್ಳಿ 7 ಮತ್ತು 5 ಕಂಚಿನ ಪದಕಗಳು ಸೇರಿವೆ.
Advertisement