ಟೋಕಿಯೊ ಒಲಂಪಿಕ್ಸ್: 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ, ಜರ್ಮನಿ ಮಣಿಸಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ

ಸುಮಾರು 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದಿದೆ.
ಕಂಚಿನ ಪದಕ ಗೆದ್ದ ಭಾರತ ತಂಡ
ಕಂಚಿನ ಪದಕ ಗೆದ್ದ ಭಾರತ ತಂಡ

ಟೋಕಿಯೋ: ಸುಮಾರು 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದಿದೆ.

ಹೌದು.. ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.  

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ  ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು. 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.

ಇನ್ನು ಈ ಹಿಂದೆ 1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದ ಸಾಧನೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com