ಒಲಂಪಿಕ್ಸ್ ಅಥ್ಲೆಟಿಕ್ಸ್ ತಂಡಕ್ಕೆ ದೆಹಲಿಯಲ್ಲಿ ಸನ್ಮಾನ, ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿ ಎಲ್ಲರೂ ಭಾಗಿ

ಇತ್ತೀಚಿಗೆ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲ ಅಥ್ಲೀಟ್ ಗಳಿಗೆ ದೆಹಲಿಯಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ
ಕಾರ್ಯಕ್ರಮದಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲ ಅಥ್ಲೀಟ್ ಗಳಿಗೆ ದೆಹಲಿಯಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯು ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಪರ ಚಿನ್ನ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಬಹುತೇಕ ಎಲ್ಲ ಅಥ್ಲೀಟ್ ಗಳು ಪಾಲ್ಗೊಂಡಿದ್ದಾರೆ. 

13 ವರ್ಷಗಳ ಬಳಿಕ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಈ ಕಾರ್ಯಕ್ರಮದ ಪ್ರಧಾನ ಆಕರ್ಷಣೆಯಾಗಿದ್ದರು. 

ಪ್ರತೀ ವರ್ಷ ಸ್ಪರ್ಧೆ
ಇನ್ನು ನೀರಜ್ ಚೋಪ್ರಾ ಅವರನ್ನು ಸನ್ಮಾನಿಸಿ ಮಾತನಾಡಿದ ಎಎಫ್‌ಐ ಯೋಜನಾ ಸಮಿತಿ ಯ ಮುಖ್ಯಸ್ಥ ಲಲಿತ್ ಭಾನೋಟ್ ಅವರು, 'ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಯೋಜನಾ ಸಮಿತಿಯು ಜಾವೆಲಿನ್ ಥ್ರೋ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ನಿರ್ಧರಿಸಿದೆ. ಟೋಕಿಯೊದಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದರಿಂದ ಪ್ರತಿ ವರ್ಷ ಆಗಸ್ಟ್ 7 ರಂದು ದೇಶಾದ್ಯಂತ ಜಾವೆಲಿನ್ ಥ್ರೋ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಆ ಮೂಲಕ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com