BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಕಿಡಂಬಿ ಶ್ರೀಕಾಂತ್
ಕಿಡಂಬಿ ಶ್ರೀಕಾಂತ್

ನವದೆಹಲಿ: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಹುಯೆಲ್ವಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಕಿಡಂಬಿ ಶ್ರೀಕಾಂತ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಷಟ್ಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಸೆಮಿ ಫೈನಲ್ ನಲ್ಲಿ ಕಿಡಂಬಿ ಶ್ರೀಕಾಂತ್ ಅವರು ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಲಕ್ಷ್ಯ ಸೇನ್ ರನ್ನು ಶ್ರೀಕಾಂತ್ ಅವರು, 21-17, 17-17, 21-14 ನೇರ ಸೆಟ್ ಗಳ ಅಂತರದಲ್ಲಿ ಮಣಿಸಿ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದರು. ಒಂದು ಹಂತದಲ್ಲಿ 4-8 ರಿಂದ ಹಿನ್ನಡೆಯಲ್ಲಿದ್ದ ಶ್ರೀಕಾಂತ್ ಬಳಿಕ ಅದ್ಭುತ ಕಮ್ ಬ್ಯಾಕ್ ಮಾಡಿ ಇಡೀ ಪಂದ್ಯದ ಮೇಲೆ ಪ್ರಬಲ ಹಿಡಿತ ಸಾಧಿಸಿದರು.  ಮೂರನೇ ಗೇಮ್ ಅನ್ನು 21-17 ರಲ್ಲಿ ಮುನ್ನಡೆ ಸಾಧಿಸಲು ಅವರು ಬಹಳಷ್ಟು ಶ್ರಮವಹಿಸಬೇಕಾಯಿತು. ಅಂತಿಮವಾಗಿ ಪಂದ್ಯ ಗೆಲ್ಲುವ ಮೂಲಕ ಶ್ರೀಕಾಂತ್ ಇತಿಹಾಸ ನಿರ್ಮಿಸಿದ್ದಾರೆ.

ಡಿಸೆಂಬರ್ 19 ರಂದು ನಡೆಯಲಿರುವ ಪುರುಷರ ಸಿಂಗಲ್ಸ್ ಫೈನಲ್ ನಲ್ಲಿ ಶ್ರೀಕಾಂತ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com