ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ 2032ರ ಒಲಿಂಪಿಕ್ಸ್ ಕ್ರೀಡಾಕೂಟ: ಐಒಸಿ

2032ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಬುಧವಾರ ಮಾಹಿತಿ ನೀಡಿದೆ.

Published: 21st July 2021 04:34 PM  |   Last Updated: 21st July 2021 05:02 PM   |  A+A-


Olympiad in 2032

ಒಲಿಂಪಿಕ್ಸ್ ಕ್ರೀಡಾಕೂಟ

Posted By : Srinivasamurthy VN
Source : ANI

ಟೋಕಿಯೊ: 2032ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಬುಧವಾರ ಮಾಹಿತಿ ನೀಡಿದೆ.

2032ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಬ್ರಿಸ್ಬೇನ್‌ನ್ನು ಬುಧವಾರ ಆಯ್ಕೆ ಮಾಡಲಾಗಿದ್ದು, ಆ ಮೂಲಕ  32 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟ ಆಸ್ಟ್ರೇಲಿಯಾದಲ್ಲಿ ನಡೆಯುವಂತಾಗಿದೆ. ಈ ಹಿಂದೆ 2000ರಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆದಿತ್ತು. ಅದಕ್ಕೂ ಮೊದಲು ಮೆಲ್ಬರ್ನ್ ನಗರ 1956 ರಲ್ಲಿ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿತ್ತು.

ಈ ಕುರಿತು ಲೈವ್ ಬಂದು ಸಂತಸ ಹಂಚಿಕೊಂಡಿರುವ ಆಸಿಸ್ ಪ್ರಧಾನಿ ಸ್ಕಾಟ್ ಮಾರಿಸನ್ ಅವರು, ಆಸಿಸ್ ನಲ್ಲಿ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಲಿದೆ. ಕ್ರೀಡೆಗೆ ಆಸ್ಟ್ರೇಲಿಯಾದಲ್ಲಿ ಅತ್ಯಂತ ಹೆಚ್ಚು ಮಹತ್ವವಿದೆ ಎಂಬುದು ಇಡೀ ಜಗತ್ತೀಗೆ ತಿಳಿದಿದೆ ಎಂದು ಹೇಳಿದರು.

ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿದ್ದು, ಬಳಿಕ 2028ರ ಒಲಿಂಪಿಕ್ಸ್ ಕ್ರೀಡಾಕೂಟ ಲಾಸ್ ಎಂಜಲೀಸ್ ನಲ್ಲಿ ನಡೆಯಲಿದೆ.


Stay up to date on all the latest ಕ್ರೀಡೆ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp