ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧುಗೆ ಭರ್ಜರಿ ಜಯ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡ ಬುಧವಾರ ಶುಭಾರಂಭ ಮಾಡಿದ್ದು, ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ಸಾಧಿಸಿದ್ದಾರೆ.
ಪಿವಿ ಸಿಂಧು
ಪಿವಿ ಸಿಂಧು

ಟೊಕಿಯೋ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತಂಡ ಬುಧವಾರ ಶುಭಾರಂಭ ಮಾಡಿದ್ದು, ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ಸಾಧಿಸಿದ್ದಾರೆ.

ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಪಿವಿ ಸಿಂಧು ಹಾಂಕಾಂಗ್ ನ ನ್ಗಾನ್ ಯಿ ಚೆಯುಂಗ್ ವಿರುದ್ಧ 21-9, 21-16 ನೇರ ಸೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. 

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗಿದ್ದ ಪಿವಿ ಸಿಂಧು ಮೊದಲ ಸೆಟ್ ನಲ್ಲಿ 21-9ರಲ್ಲಿ ಮುನ್ನಡೆ ಸಾಧಿಸಿದರು. ಬಳಿಕ 2ನೇ ಸೆಟ್ ನಲ್ಲಿ ನ್ಗಾನ್ ಯಿ ಚೆಯುಂಗ್ ಕೊಂಚ ವಿರೋಧ ತೋರಿದರಾದೂ 2ನೇ ಸೆಟ್ ಅನ್ನೂ ಕೂಡ ಸಿಂಧು 21-16 ಅಂತರದಲ್ಲಿ ತಮ್ಮದಾಗಿಸಿಕೊಂಡು ಜಯ ಸಾಧಿಸಿ  ಟೂರ್ನಿಯ ಮುಂದಿನ ಹಂತಕ್ಕೆ ಮುನ್ನಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com