ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಚಿತ, ಸೆಮಿಫೈನಲ್​​​​​​ ಪ್ರವೇಶಿಸಿ ಇತಿಹಾಸ ರಚಿಸಿದ ಬಾಕ್ಸರ್​ 'ಲವ್ಲಿ'ನಾ!

ಟೋಕಿಯೊ ಒಲಂಪಿಕ್ಸ್'ನ ಬಾಕ್ಸಿಂಗ್​ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ​ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾದಂತಾಗಿದೆ. 
ಗೆಲುವಿನ ಬಳಿಕ ಸಂತಸ ವ್ಯಕ್ತಪಡಿಸುತ್ತಿರುವ ಲವ್ಲಿನಾ ಬೊರ್ಗೊಹೈನ್
ಗೆಲುವಿನ ಬಳಿಕ ಸಂತಸ ವ್ಯಕ್ತಪಡಿಸುತ್ತಿರುವ ಲವ್ಲಿನಾ ಬೊರ್ಗೊಹೈನ್

ಟೋಕಿಯೊ: ಟೋಕಿಯೊ ಒಲಂಪಿಕ್ಸ್'ನ ಬಾಕ್ಸಿಂಗ್​ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ​ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾದಂತಾಗಿದೆ. 

ಟೋಕಿಯೊ ಒಲಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು ಇದುವರೆಗೂ ಭಾರತದ ಪರ ಪದಕವನ್ನು ಗೆದ್ದಿರುವ ಏಕೈಕ ಆಟಗಾರ್ತಿ ಮೀರಾಬಾಯಿ ಚಾನು ಮಾತ್ರ. ಸೈಕೋಮ್ ಮೀರಾಬಾಯಿ ಚಾನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಕ್ರೀಡಾಪಟು ಕೂಡ ಪದಕವನ್ನು ಗೆದ್ದಿಲ್ಲ.

ಪಿವಿ ಸಿಂಧು, ಅತನು ದಾಸ್, ದೀಪಿಕಾ ಕುಮಾರಿ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿದ್ದಾರೆ. ಇವರುಗಳ ಜೊತೆ ಇದೀಗ ಭಾರತದ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶ ಮಾಡಿದ್ದು, ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.

ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ ಎರಡನೇ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಚೀನಾದ ಎನ್ ಸಿ ಚೆನ್ ವಿರುದ್ಧ 4-1 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಭಾರತದ ಲೊವ್ಲಿನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಐದು ಸುತ್ತುಗಳಲ್ಲಿ ನಡೆದ ಪಂದ್ಯದಲ್ಲಿ ಲವ್ಲಿನಾ ಎದುರಾಳಿಗೆ ಭರ್ಜರಿ ಪಂಚ್ ನೀಡಿ ತೀರ್ಪುಗಾರರ ಮನ ಗೆಲ್ಲುವಲ್ಲಿ ಸಫಲರಾದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಅವರು ಭಾರತ ಪರ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com