ಟೊಕಿಯೋ ಒಲಂಪಿಕ್ಸ್: ಕ್ವಾರ್ಟರ್ ಫೈನಲ್ ನಲ್ಲಿ ಭಾರತ ಪಿವಿ ಸಿಂಧುಗೆ ರೋಚಕ ಜಯ, ಸೆಮೀಸ್ ಗೆ ಲಗ್ಗೆ

ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ರೋಚಕ ಜಯ ಸಾಧಿಸಿದ್ದಾರೆ.
ಪಿ ವಿ ಸಿಂಧು(ಸಂಗ್ರಹ ಚಿತ್ರ )
ಪಿ ವಿ ಸಿಂಧು(ಸಂಗ್ರಹ ಚಿತ್ರ )

ಟೋಕಿಯೊ: ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ರೋಚಕ ಜಯ ಸಾಧಿಸಿದ್ದಾರೆ.

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಪೈನಲ್ ಪಂದ್ಯದಲ್ಲಿ ಭಾರತದ ಪಿವಿ ಸಿಂಧು ಭರ್ಜರಿ ಜಯ ದಾಖಲಾಸಿ, ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.

ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್ ನ ನಾಲ್ಕನೇ ಶ್ರೇಯಾಂಕದ ಅಕನೆ ಯಮಗುಚಿ ಅವರ ವಿರುದ್ಧ 21-13, 22-20 ಅಂತರದಲ್ಲಿ ಜಯ ದಾಖಲಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. 

ನಿನ್ನೆಯಷ್ಟೇ ಸಿಂಧು ಡೆನ್ಮಾರ್ಕ್ ನ ಮಿಯಾ ಬ್ಲಿಚ್‌ಫೆಲ್ಡ್ ರನ್ನು ಮಣಿಸಿ ಕ್ವಾರ್ಟರ್ ಫೈನಲ್ ಗೇರಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com