ಟೋಕಿಯೋ ಒಲಿಂಪಿಕ್ಸ್ ನಿಂದ ಕರೋಲಿನಾ ಮರಿನ್ ಔಟ್; ಪಿವಿ ಸಿಂಧುಗೆ ಇದು ವರವಾಗುತ್ತಾ?

ಕಳೆದ ಬಾರಿಯ ಒಲಿಂಪಿಕ್ಸ್‌ನ ಮಹಿಳಾ ವಿಭಾಗದ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ಚಾಂಪಿಯನ್ ಸ್ಪೇನ್‌ನ ಕರೋಲಿನಾ ಮರಿನ್, ಗಾಯದ ಸಮಸ್ಯೆಯಿಂದಾಗಿ ಟೋಕಿಯೋ ಒಲಿಂಪಿಕ್ಸ್ ಕೂಟದಿಂದ ಹೊರಬಿದ್ದಿದ್ದಾರೆ.
ಪಿವಿ ಸಿಂಧು-ಮರಿನ್
ಪಿವಿ ಸಿಂಧು-ಮರಿನ್

ಟೋಕಿಯೋ: ಕಳೆದ ಬಾರಿಯ ಒಲಿಂಪಿಕ್ಸ್‌ನ ಮಹಿಳಾ ವಿಭಾಗದ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ಚಾಂಪಿಯನ್ ಸ್ಪೇನ್‌ನ ಕರೋಲಿನಾ ಮರಿನ್, ಗಾಯದ ಸಮಸ್ಯೆಯಿಂದಾಗಿ ಟೋಕಿಯೋ ಒಲಿಂಪಿಕ್ಸ್ ಕೂಟದಿಂದ ಹೊರಬಿದ್ದಿದ್ದಾರೆ.

ಮೊಣಕಾಲಿಗೆ ಗಾಯವಾಗಿರುವ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಬ್ಯಾಡ್ಮಿಂಟನ್ ಪಟು ಕರೋಲಿನಾ ಮರಿನ್, ಟೋಕಿಯೋ ಒಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ಸಾಮಾಜಿಕ ಜಾಲತಾಣಕ್ಕೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

2016ರಲ್ಲಿ ರಿಯೋ ಡೆ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳಾ ವಿಭಾಗದ ಸಿಂಗಲ್ಸ್‌ನ ಫೈನಲ್ ಪಂದ್ಯದಲ್ಲಿ ಕರೋಲಿನಾ ಮರಿನ್, ಭಾರತದ ಪಿ.ವಿ.ಸಿಂಧು ಅವರನ್ನು ಸೋಲಿಸಿ ಬಂಗಾರದ ಪದಕ ಬಾಚಿಕೊಂಡಿದ್ದರು.

ತಾವು ಎಡ ಮೊಣಕಾಲು ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವೆ. ಹೀಗಾಗಿ ಜಪಾನಿನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ಐದು ಬಾರಿ ಯುರೋಪಿಯನ್ ಚಾಂಪಿಯನ್ ಹಾಗೂ ಮೂರು ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿರುವ ಸ್ಪೇನ್‌ನ ಕರೋಲಿನಾ ಮರಿನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com