ಕೊರೋನಾ ಹೋರಾಟದಲ್ಲಿ ಗೆಲ್ಲಲಿಲ್ಲ: ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನ

ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.  

Published: 19th June 2021 01:21 AM  |   Last Updated: 19th June 2021 02:09 PM   |  A+A-


ಮಿಲ್ಖಾ ಸಿಂಗ್

Posted By : Srinivas Rao BV
Source : The New Indian Express

ಚಂಡೀಗಢ: ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.  

ಈ ಮಾಹಿತಿಯನ್ನು ಕುಟುಂಬದ ವಕ್ತಾರರು ದೃಢಪಡಿಸಿದ್ದಾರೆ. ಜೂ.14 ರಂದು ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವನ್ನಪ್ಪಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಿಲ್ಖಾ ಸಿಂಗ್ (91) ಗಾಲ್ಫರ್ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಕೊರೊನಾದಿಂದ ತೀವ್ರವಾಗಿ ಅನಾರೋಗ್ಯ ಎದುರಿಸಿದ್ದ ಮಿಲ್ಖಾ ಸಿಂಗ್ ಚೇತರಿಸಿಕೊಂಡು ಜೂ.16 ರಂದು ಐಸಿಯುನಿಂದ ಹೊರ ಬಂದಿದ್ದರು. ಆದರೆ ಜೂ.18 ರಂದು ರಾತ್ರಿ 11:30 ರ ವೇಳೆಗೆ ಮೃತಪಟ್ಟಿದ್ದಾರೆ.

ಏಕಾ ಏಕಿ ಜ್ವರ ಮತ್ತು ಆಕ್ಸಿಜನ್ ಪ್ರಮಾಣ ಕುಸಿತ ಕಂಡ ಪರಿಣಾಮ ಮಿಲ್ಖಾ ಸಿಂಗ್ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು ಕೊರೋನಾ ಸೋಂಕಿಗೆ ಗುರಿಯಾಗಿದ್ದ ಮಿಲ್ಖಾ ಸಿಂಗ್ ಜೂ.16 ರಂದು ಕೊರೋನಾ ಸೋಂಕು ಪತ್ತೆ ಪರೀಕ್ಷೆ ನೆಗೆಟೀವ್ ಬಂದಿತ್ತು. ಗುರುವಾರದಂದು ಸಂಜೆ ಮಿಲ್ಖಾ ಸಿಂಗ್ ಅವರ ಆರೋಗ್ಯ ಸ್ಥಿರವಾಗಿತ್ತು.

ಮಿಲ್ಖಾ ಸಿಂಗ್ ನಾಲ್ಕು ಬಾರಿ ಏಷ್ಯನ್ಸ್ ಗೇಮ್ಸ್ ನಲ್ಲಿ ಚಿನ್ನದ ಪದಕದ ವಿಜೇತರಾಗಿದ್ದು, 1958 ರ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. 1960 ರ ರೋಮ್ ಒಲಂಪಿಕ್ಸ್ ನಲ್ಲಿ 400 ಮೀಟರ್ ಫೈನಲ್ ನಲ್ಲಿ ನಾಲ್ಕನೇ ಸ್ಥಾನ ಗೆದ್ದಿದ್ದು ಮಿಲ್ಖಾ ಅವರ ಅತ್ಯುತ್ತಮ ಸಾಧನೆಯಾಗಿದೆ. 1956 ಹಾಗೂ 1964 ರ ಒಲಂಪಿಕ್ಸ್ ನಲ್ಲಿ ಮಿಲ್ಖಾ ಸಿಂಗ್ ಭಾರತವನ್ನು ಪ್ರತಿನಿಧಿಸಿದ್ದರು.

ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ
ಖ್ಯಾತ ಓಟಗಾರ ಮಿಲ್ಖಾ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಿಲ್ಖಾ ಸಿಂಗ್ ಅವರನ್ನು ಅಸಾಧಾರಣ ಕ್ರೀಡಾಪಟು ಎಂದು ಮೋದಿ ಹೇಳಿದ್ದಾರೆ.

ಸರಣಿ ಟ್ವೀಟ್‌ ಮಾಡಿದ ಮೋದಿ, "ಮಿಲ್ಖಾ ಸಿಂಗ್ ಒಬ್ಬ ಮಹಾನ್ ಕ್ರೀಡಾಪಟು, ಅವರನ್ನು ನಾವು ಕಳೆದುಕೊಂಡಿದ್ದೇವೆ. ಅಸಂಖ್ಯಾತ ಭಾರತೀಯರ ಹೃದಯದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಅವರ ವ್ಯಕ್ತಿತ್ವವು ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ" ಎಂದು ತಿಳಿಸಿದ್ದಾರೆ.

"ನಾನು ಕೆಲವು ದಿನಗಳ ಹಿಂದೆ ಮಿಲ್ಖಾ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ. ಅವರ ಜೀವನವು ಅನೇಕ ಉದಯೋನ್ಮುಖ ಕ್ರೀಡಾಪಟುಗಳಿಗೆ ಬಲವನ್ನು ನೀಡುತ್ತದೆ. ಅವರ ಕುಟುಂಬ ಮತ್ತು ವಿಶ್ವದಾದ್ಯಂತದ ಅಭಿಮಾನಿಗಳಿಗೆ ನನ್ನ ಸಂತಾಪ" ಎಂದು ಹೇಳಿದ್ದಾರೆ.


Stay up to date on all the latest ಕ್ರೀಡೆ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp