ಪ್ಯಾರಾಲಿಂಪಿಕ್ಸ್ ಅಥ್ಲೀಟ್‌ ಗಳಿಗೆ ಆತಿಥ್ಯ: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮೋದಿ ಭಾನುವಾರ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.  

ಗುರುವಾರ ಪ್ರಧಾನಿ ಮೋದಿ ಪ್ಯಾರಾಲಿಂಪಿಕ್ ಕ್ರೀಡಾಪಟುಗಳು ಹಾಗೂ ಅವರ ತರಬೇತುದಾರರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ಆಯೋಜಿಸಿದ್ದರು. ಈ ಸಂದರ್ಭದಲ್ಲಿ, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳನ್ನು ಮೋದಿ ಅಭಿನಂದಿಸಿದ್ದರು. 

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆ, ದೇಶಾದ್ಯಂತ ಕ್ರೀಡಾ ಸಮುದಾಯದ ಧೈರ್ಯವನ್ನು ಹೆಚ್ಚಿಸುತ್ತಿದೆ. ನಿಮ್ಮ  ಯಶಸ್ಸು ಭಾರತದಿಂದ ಇನ್ನೂ ಹೆಚ್ಚಿನ ಆಟಗಾರರನ್ನು ಅಭಿವೃದ್ಧಿಪಡಿಸುತ್ತದೆ. ಅಂತರಾಷ್ಟ್ರೀಯ ವೇದಿಕೆಯಲ್ಲಿ ಮನ್ನಣೆ ಪಡೆಯಲು ಪ್ರೋತ್ಸಾಹಿಸುತ್ತದೆ ಎಂದು ಮೋದಿ ಹೇಳಿದ್ದರು.

ನೀವು ಪಟ್ಟ ಕಷ್ಟದಿಂದಾಗಿ  ಇಂದು ಖ್ಯಾತಿ ಗಳಿಸಿದ್ದೀರಿ. ನೀವೆಲ್ಲರೂ ಜನರನ್ನು ಪ್ರೇರೇಪಿಸಬಹುದು. ದೊಡ್ಡ ಬದಲಾವಣೆ ತರಲು ಸಹಾಯ ಮಾಡಬಹುದು ... ನಾನು ನಿಮ್ಮೆಲ್ಲರೊಂದಿಗೆ ಸದಾ ಇರುತ್ತೇನೆ ಎಂದು ಮೋದಿ ಕ್ರೀಡಾಪಟುಗಳಿಗೆ ಹೇಳಿದ್ದರು.

ಪ್ರಧಾನಿ ತಮ್ಮೊಂದಿಗೆ ಕುಳಿತು ಮಾತನಾಡಿದ್ದು, ತಮ್ಮನ್ನು ಆಹ್ವಾನಿಸಿ ಅಭಿನಂದಿಸಿರುವುದು ಅತ್ಯಂತ ಗೌರವ ಎಂದು ಭಾವಿಸುವುದಾಗಿ ಕ್ರೀಡಾಪಟುಗಳು ಹೇಳಿದರು. ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಅವರ ಆಟೋಗ್ರಾಫ್‌ನೊಂದಿಗಿನ ಉಪಕರಣಗಳನ್ನು ಕೊಡಿಗೆಯಾಗಿ ನೀಡಿದರು. ಈ  ಕೊಡಿಗೆಗಳನ್ನು ನಂತರ ಹರಾಜು ಹಾಕಲಾಗುವುದು ಎಂಬ ಮೋದಿ ಅವರ ಹೇಳಿಕೆಯನ್ನು ಕ್ರೀಡಾಪಟುಗಳು ಸ್ವಾಗತಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com