ಪ್ರೋ ಕಬಡ್ಡಿ ಲೀಗ್: ಪುಣೇರಿ ಪಲ್ಟನ್ ಸೋಲಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್

ಪ್ರೋ ಕಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್ ತಂಡವನ್ನು ಸೋಲಿಸಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. 
ಜೈಪುರ ಪಿಂಕ್ ಪ್ಯಾಂಥರ್ಸ್
ಜೈಪುರ ಪಿಂಕ್ ಪ್ಯಾಂಥರ್ಸ್
Updated on

ಮುಂಬೈ: ಪ್ರೋ ಕಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್ ತಂಡವನ್ನು ಸೋಲಿಸಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟನ್ ವಿರುದ್ಧ 33-29 ಅಂಕಗಳ ಅಂತರದಿಂದ ಜೈಪುರ ತಂಡ ಗೆಲುವಿನ ನಗೆ ಬೀರಿತು. ಇನ್ನು ಪ್ರೋ ಕಬಡ್ಡಿ ಲೀಗ್ ನಲ್ಲಿ ಜೈಪುರ ಎರಡನೇ ಬಾರಿಗೆ ಟ್ರೋಫಿ ಗೆದ್ದಿದೆ. ಇದಕ್ಕೂ ಮುನ್ನ 2014ರ ಉದ್ಘಾಟನಾ ಆವೃತ್ತಿಯಲ್ಲಿ ಪ್ಯಾಂಥರ್ಸ್ ತಂಡ ಚಾಂಪಿಯನ್ ಆಗಿತ್ತು.

ಜೈಪುರ ತಂಡ ಮೊದಲಾರ್ಧದಲ್ಲಿ 14-12 ಅಂಕಗಳ ಮುನ್ನಡೆ ಸಾಧಿಸಿತ್ತು. ಪಂದ್ಯದ ಕೊನೆಗೆ ಜೈಪುರ 32-29 ಅಂಕಗಳೊಂದಿಗೆ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com