ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ

ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ,  ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಈ ಭವ್ಯವಾದ ಗೆಲುವಿನಿಂದ ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

“ಇದು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ! ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು! ಅವರು ಈ ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಭವ್ಯವಾದ ಗೆಲುವಿನಿಂದ ಸಂತೋಷಪಡುತ್ತಾರೆ! ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com