ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಿಂಚಿದ ಕರ್ನಾಟಕ: 88 ಪದಕಗಳು, ನಾಲ್ಕನೇ ಸ್ಥಾನ

ಗುಜರಾತ್ ನಲ್ಲಿ ಮೊನ್ನೆ ಬುಧವಾರ ಮುಕ್ತಾಯಗೊಂಡ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ 88 ಪದಕಗಳು ಲಭಿಸಿದ್ದು, 27 ಚಿನ್ನದ ಪದಕಗಳು,23 ಬೆಳ್ಳಿ ಮತ್ತು 38 ಕಂಚಿನ ಪದಕಗಳು ಬಂದಿವೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮ
ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮ
Updated on

ಬೆಂಗಳೂರು: ಗುಜರಾತ್ ನಲ್ಲಿ ಮೊನ್ನೆ ಬುಧವಾರ ಮುಕ್ತಾಯಗೊಂಡ ರಾಷ್ಟ್ರೀಯ ಕ್ರೀಡಾಕೂಟದಲ್ಲಿ  ಕರ್ನಾಟಕಕ್ಕೆ 88 ಪದಕಗಳು ಲಭಿಸಿದ್ದು, 27 ಚಿನ್ನದ ಪದಕಗಳು,23 ಬೆಳ್ಳಿ ಮತ್ತು 38 ಕಂಚಿನ ಪದಕಗಳು ಬಂದಿವೆ.

ಈ ಮೂಲಕ ದೇಶದಲ್ಲಿ ಪದಕ ವಿಜೇತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. 21 ವರ್ಷಗಳ ನಂತರ ಕರ್ನಾಟಕ ಪುರುಷರ ಹಾಕಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಟಾಪ್ 5 ಸ್ಥಾನ ಸಿಕ್ಕಿದೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, 2007 ರಲ್ಲಿ ರಾಜ್ಯವು 21 ಚಿನ್ನ ಸೇರಿದಂತೆ 71 ಪದಕಗಳನ್ನು ಗೆದ್ದುಕೊಂಡಿತ್ತು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದ ಆಯುಕ್ತ ಎಚ್‌ಎನ್ ಗೋಪಾಲಕೃಷ್ಣ, “ರಾಜ್ಯವು ಕ್ರೀಡಾ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ಕ್ರೀಡಾಪಟುಗಳಿಗೆ ನೀಡುವ ಇತರ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಯಿತು. ರಾಜ್ಯ ಸರ್ಕಾರವು ಇತ್ತೀಚೆಗೆ ಅಮೃತ ಕ್ರೀಡಾ ಯೋಜನೆಯನ್ನು ಪ್ರಾರಂಭಿಸಿದ್ದು, ವಿದೇಶದಿಂದ ತರಬೇತಿ ಪಡೆಯಲು 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂಪಾಯಿ ನೀಡುತ್ತಿದೆ. 

ಸರ್ಕಾರ ಈಗ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವತ್ತ ಗಮನಹರಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 6,700 ಕ್ಕೂ ಹೆಚ್ಚು ಆಟದ ಮೈದಾನಗಳು, ಟ್ರ್ಯಾಕ್‌ಗಳು, ವಾಲಿಬಾಲ್ ಮೈದಾನಗಳು ಮತ್ತು ಇತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 504 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ MNREGA ಯೋಜನೆಗಳ ಅಡಿಯಲ್ಲಿ ಈಗಾಗಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತರಬೇತುದಾರರ ನೇಮಕಾತಿ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಇಲಾಖೆಯು ಪ್ರಥಮ ಬಾರಿಗೆ 176 ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದೆ.

176 ರಲ್ಲಿ, ಶೇಕಡಾ 50 ಮೀಸಲಾತಿಯು ಕ್ರೀಡಾ ಕೋಟಾದ ಅಭ್ಯರ್ಥಿಗಳಿಗೆ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದವರಿಗೆ ಇರುತ್ತದೆ ಎಂದರು. ಇಷ್ಟು ವರ್ಷಗಳ ಕಾಲ ಶಿಕ್ಷಣ ಇಲಾಖೆಯು ಪಿಟಿ ಶಿಕ್ಷಕರಿಗೆ ತರಬೇತಿ ನೀಡಲು ಶಿಕ್ಷಣ ಇಲಾಖೆ ಮೇಲೆ ಅವಲಂಬಿತವಾಗಿತ್ತು. ಆದರೆ ಈಗ, ನಾವು ನಮ್ಮದೇ ಆದ ತಜ್ಞರನ್ನು ಹೊಂದಿದ್ದರೆ ಸಹಾಯವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com