ಖೇಲೋ ಇಂಡಿಯಾ ವಿವಿ ಗೇಮ್ಸ್ ಗೆ ಚಾಲನೆ, ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು- ಉಪರಾಷ್ಟ್ರಪತಿ

ಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

Published: 24th April 2022 08:48 PM  |   Last Updated: 24th April 2022 08:48 PM   |  A+A-


Kheli_india1

ಖೇಲೋ ಇಂಡಿಯಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಭಾಗಿ

Online Desk

ಬೆಂಗಳೂರು: ಎರಡನೇ ಆವೃತ್ತಿಯ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕೇಂದ್ರ ವಾರ್ತಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ಡಾ. ನಾರಾಯಣಗೌಡ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಎಂ. ವೆಂಕಯ್ಯ ನಾಯ್ಡು, ಕಬಡ್ಡಿ, ಖೋ-ಖೋ ರೀತಿಯ ಸ್ಥಳೀಯ ಹಾಗೂ ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಈ ಕ್ರೀಡೆಗಳು ನಮ್ಮ ರಾಷ್ಟ್ರದ ಹೆಮ್ಮೆಯ ಮೂಲಗಳಾಗಿವೆ. ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕಾದ ಅಗತ್ಯವಿದೆ. ಕ್ರೀಡೆಗಳು ಅಥವಾ ಯೋಗ ನಮ್ಮ ಶಾಲಾ ಪಠ್ಯಕ್ರಮದಲ್ಲಿ ಅವಿಭಾಜ್ಯ ಅಂಗವಾಗಬೇಕು ಎಂದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಕರ್ನಾಟಕ ರಾಜ್ಯ ಅಂತಾರಾಷ್ಟ್ರೀಯ ಸೌಲಭ್ಯಗಳೊಂದಿಗೆ ಕ್ರೀಡಾ ಸ್ಥಳಗಳನ್ನು ವ್ಯಾಪಕವಾಗಿ ನವೀಕರಿಸುತ್ತಿದೆ. ಈ ಸುಧಾರಣೆಗಳು ರಾಜ್ಯದಲ್ಲಿ ಹೊಸ ಕ್ರೀಡಾ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಮತ್ತು ಆರೋಗ್ಯಕರ ಜೀವನಕ್ಕಾಗಿ ಜನರು ತಮ್ಮ ದಿನಚರಿಯಲ್ಲಿ ಕ್ರೀಡೆ ಮತ್ತು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡೆಗಳನ್ನು ಪ್ರಾಮಾಣಿಕವಾಗಿ ಆಡಬೇಕು. ಸೋಲು, ಗೆಲುವು ಆಟದ ಭಾಗ. ಎರಡನ್ನೂ ಸಮನಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಪ್ರದರ್ಶಿಸಬೇಕು. ಗೆಲ್ಲಲೇಬೇಕೆಂಬ ಛಲದೊಂದಿಗೆ ಆಟವಾಡಬೇಕು. ಸೋಲಿನ ಭಯ ಇಲ್ಲದಿದ್ದರೆ ಗೆಲುವು ನಿಮ್ಮದಾಗುತ್ತದೆ ಎಂದು  ಸಲಹೆ ನೀಡಿದರು. 

ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಆಯೋಜಿಸಿರುವುದು ನಮಗೆ ಅತ್ಯಂತ ಹೆಮ್ಮೆಯ ಸಂಗತಿ. ಬೆಂಗಳೂರು ಇಡೀ ದೇಶದಲ್ಲಿಯೇ ಅತ್ಯಂತ ಪ್ರಗತಿಪರವಾಗಿರುವ ರಾಜಧಾನಿಯಾಗಿದೆ. ಖೇಲೋ ಇಂಡಿಯಾ ವಿವಿಮಟ್ಟದ ಕ್ರೀಡಾಕೂಟ ಆಯೋಜಿಸಲು ಮೂಲಭೂತ ಸೌಕರ್ಯ ಮತ್ತು ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದೇವೆ.  ರಾಷ್ಟ್ರಮಟ್ಟದಲ್ಲಿ ಯಾವುದೇ ಕ್ರೀಡಾಕೂಟ ಇದ್ದರೂ ಪ್ರಥಮ ಆದ್ಯತೆಯನ್ನು ಬೆಂಗಳೂರಿಗೆ ನೀಡಬೇಕು ಎಂದರು.


Stay up to date on all the latest ಕ್ರೀಡೆ news
Poll
Parliament

2024 ರ ಚುನಾವಣೆಯಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷ ಯಾವುದು ಎಂದು ನೀವು ಭಾವಿಸುತ್ತೀರಿ?


Result
ಕಾಂಗ್ರೆಸ್
ಎಎಪಿ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp